ಕರಾವಳಿ

ಇಂದಿನಿಂದ ಜೂ.7ರ ತನಕ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲ್ಲ: ಉಡುಪಿ ಡಿಸಿ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ, ಮೇ 25 ರಿಂದ ಜೂನ್ 7 ರವೆರೆಗೆ ಯಾವುದೇ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಈಗಾಗಲೇ ಅನುಮತಿ ಪಡೆದಿರುವ ಮದುವೆಗಳನ್ನು ನಡೆಸಬಹುದಾಗಿದ್ದು, ಹೊಸದಾಗಿ ಅನುಮತಿಗಳನ್ನು ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮದುವೆ ಸಮಾರಂಭದಲ್ಲಿ ಭಾಗವಹಿಸಿದ ಬಹುತೇಕ ಮಂದಿಯಲ್ಲಿ‌ ಕೋವಿಡ್ ಪ್ರಕರಣಗಳು ಹೆಚ್ಚೆಚ್ಚು ಕಂಡುಬಂದ ಹಿನ್ನೆಲೆ ಡಿಸಿ ಈ ಆದೇಶ ಮಾಡಿದ್ದಾರೆ.

Comments are closed.