ಕರಾವಳಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಜೂ.8ಕ್ಕೆ ಅಂತಿಮ ತೀರ್ಪು ಪ್ರಕಟ

Pinterest LinkedIn Tumblr

ಉಡುಪಿ : ಬಹುಕೋಟಿ ಉದ್ಯಮಿಯಾಗಿದ್ದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 8ಕ್ಕೆ ಅಂತಿಮ ತೀರ್ಪು ಹೊರಬೀಳಲಿದೆ. ಸೋಮವಾರ ಪ್ರಕಟವಾಗಬೇಕಿದ್ದ ಅಂತಿಮ ತೀರ್ಪನ್ನು ಕೋವಿಡ್‌ ಕಾರಣದಿಂದಾಗಿ ಜೂ.8ಕ್ಕೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೆ.ಎನ್‌.ಸುಬ್ರಹ್ಮಣ್ಯ ಅವರು ಮುಂದೂಡಿದ್ದಾರೆ.

ಪ್ರಕರಣದ ಆರೋಪಿ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್‌ ಭದ್ರತೆಯನ್ನು ನೀಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಜೂ.8ರಂದು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ರಾಘವೇಂದ್ರ ಅವರು ಇರುವಂತೆ ಸೂಚಿಸಲಾಗಿದೆ. ವೀಡಿಯೋ ಕಾನ್ಫರೆನ್ಸ್‌ ಮೂಲಕ ಉಳಿದ ಆರೋಪಿಗಳೂ ಹಾಜರಿರುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಪ್ರಕರಣದ ಆರೋಪಿಗಳ ಪೈಕಿ ಶ್ರೀನಿವಾಸ ಭಟ್‌ ಈಗಾಗಲೇ ಮೃತಪಟ್ಟಿದ್ದಾರೆ.

Comments are closed.