ಉಡುಪಿ: ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು ಈ ಅವಧಿಯಲ್ಲಿ ಯಾವೆಲ್ಲಾ ಸೇವೆಗಳಿಗೆ ಅವಕಾಶ ಇದೆ ಯಾವುದು ಇರಲ್ಲ ಎಂದು ಡಿಸಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಸೋಮವಾರದಿಂದ ಹೊಸ ಮಾರ್ಗಸೂಚಿ ಬರಲಿದೆ ಎಂದು ಡಿಸಿ ಹೇಳಿದ್ದಾರೆ.

ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID-19 ಕಂಟೈನ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಇಂತಹ ಸಂಸ್ಧೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.
24/7 ಸಮಯಾವಧಿಯಲ್ಲಿ ಕಾರ್ಯಚರಿಸುವ ತುರ್ತು ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ/ ಸಂಸ್ಥೆ ನೀಡುವ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.
ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನಿ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು .ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವುದು (work from home).
ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಿದೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿಗಳಿಗೆ ಅವಕಾಶವಿದೆ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.
ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ.. ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸುವುದು.
ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ.
ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, , ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಕೋವಿಡ್ 19 ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.
ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.
ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.
Comments are closed.