ಕರಾವಳಿ

ಉಡುಪಿ ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತ ಹಾನಿ ವೀಕ್ಷಿಸಿದ ಕೇಂದ್ರ ತಂಡ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ತಂಡವು, ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು.

ಕೇಂದ್ರ ತಂಡದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸೂಪರಿಟೆಂಡೆಂಟ್ ಇಂಜನಿಯರ್ ಸದಾನಂದ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನು ಸ್ವಾಮಿ, ಹಾಗೂ ಇವರೊಂದಿಗೆ ರಾಜ್ಯ ವಿಪತ್ತು ನಿರ್ವಹಣ ವಿಭಾಗದ ಆಯುಕ್ತ ಮನೋಜ್ ರಾಜನ್, ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ವಿಜ್ಞಾನಿ ಡಾ.ಶ್ರೀನಿವಾಸ ರೆಡ್ಡಿ ಇದ್ದರು.

ಜಿಲ್ಲೆಯ ಉಪ್ಪುಂದ, ಮೆಡಿಕಲ್, ಬೈಂದೂರು, ಮರವಂತೆ, ಕಾಪುಲೈಟ್ ಹೌಸ್, ಕೈಪುಂಜಾಲು ಪಡುಬಿದ್ರೆ ಬೀಚ್ ಮತ್ತು ಬ್ಲೂ ಫ್ಲಾಗ್ ಬೀಚ್ ಗೆ ಭೇಟಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ವಿಬಾಗಾಧಿಕಾರಿ ರಾಜು , ಬೈಂದೂರು ತಹಸೀಲ್ದಾರ್ ಶೋಭಾಲಕ್ಷಿ, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಸೀಲ್ದಾರ್ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.

Comments are closed.