ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ವಾರಾಂತ್ಯ ಕರ್ಫ್ಯೂ: ಮಾರ್ಗಸೂಚಿ ಬಿಡುಗಡೆ

Pinterest LinkedIn Tumblr

ಉಡುಪಿ: ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

(File Photo)

ರೋಗಿಗಳು ಮತ್ತು ಅವರ ಸಹಾಯಕರಿಗೆ ಮತ್ತು ವ್ಯಾಕ್ಸಿನೇಷನ್ ಪಡೆದುಕೊಳ್ಳಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು ಮಾಂಸದ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಚೇರಿಗಳು, ಅವುಗಳ ಸ್ವಾಯತ್ತ ಸಂಸ್ಥೆಗಳು ಹಾಗೂ ಅದರಲ್ಲಿ ದುಡಿಯುವ ಅಧಿಕಾರಿಗಳು ಸಿಬ್ಬಂದಿಗಳ ಸಂಚಾರಕ್ಕೆ ಅನುಮತಿ ಇದೆ, ತುರ್ತು ಮತ್ತು ಅಗತ್ಯ ಸೇವೆಗಳ ಕೈಗಾರಿಕೆಗಳು, ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇದೆ.

ಮದ್ಯದಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನು ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿದೆ. ಬಸ್, ರೈಲು ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ರೈಲ್ವೆ, ಬಸ್, ವಿಮಾನ ನಿಲ್ದಾಣದಿಂದ ಟ್ಯಾಕ್ಸಿ ಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಯಾಣಿಸಬಹುದಾಗಿದೆ. ಪಾನಿಪುರಿ, ಚಾಟ್ಸ್ ಅಂಗಡಿಗಳಿಗೆ ಅವಕಾಶ ನೀಡಲಾಗಿಲ್ಲ.

ಈಗಾಗಲೇ ನಿಗದಿಯಾದ ಮದುವೆಯನ್ನು ಮನೆಯಲ್ಲಿ 40 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ಶವಸಂಸ್ಕಾರಕ್ಕೆ ಕೇವಲ 5 ಮಂದಿಗೆ ಅವಕಾಶ ನೀಡಲಾಗಿದೆ.

Comments are closed.