ಕುಂದಾಪುರ: ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ಸಾರ್ರಿ ವಾರ್ಡಿನಲ್ಲಿ ಅನಾರೋಗ್ಯ ಹಿನ್ನೆಲೆ ದಾಖಲಾಗಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಳವಾದ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ಪುತ್ರ ಪ್ರಕರಣ ದಾಖಲು ಮಾಡಿದ್ದಾರೆ.

ದೂರಿನ ಸಾರಾಂಶ…
ಜು.5ರಂದು 6 ಗಂಟೆಗೆ ತನ್ನ ತಾಯಿಯನ್ನು ಅನಾರೋಗ್ಯ ನಿಮಿತ್ತ ಕುಂದಾಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿದ್ದು ಜು.7 ರಂದು 4 ಗಂಟೆಗೆ ತಾಯಿ ಕುತ್ತಿಗೆಯಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಸರ ಇಲ್ಲದೆ ಇರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಳೆದುಹೋದ ಚಿನ್ನದ ಸರವನ್ನು ಆಸ್ಪತ್ರೆಯ ಕೊಠಡಿಯಲ್ಲಿ ಹುಡುಕಿದ್ದಲ್ಲದೆ ಆಸ್ಪತ್ರೆಯ ಸಿಬ್ಬಂದಿಗಳಲ್ಲಿ ವಿಚಾರಿಸಿದರೂ ಸರ ಪತ್ತೆಯಾಗಿಲ್ಲ. ಚಿನ್ನದ ಸರವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಕಳೆದುಹೋದ ಚಿನ್ನದ ಸರದ ಮೌಲ್ಯ 84,000 ರೂ ಆಗಿದೆ ಎಂದು ಮಹಿಳೆ ಪುತ್ರ ಮಲ್ಲಿಕಾರ್ಜುನ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಇದನ್ನೂ ಓದಿರಿ:
ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿದ್ದ ಮಹಿಳೆಯ ಚಿನ್ನದ ಸರ ಕಳವು..!
Comments are closed.