ಬೆಂಗಳೂರು: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

(ಸಾಂದರ್ಭಿಕ ಚಿತ್ರ)
ಕೋವಿಡ್ ಸಂಬಂಧ ತಜ್ಞರು, ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕೇರಳದಲ್ಲಿ ಪ್ರತಿದಿನ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ ಹಾಗಾಗಿ ಕೇರಳದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ ಒಂದು ವಾರ ಕ್ವಾರಂಟೈನ್ ಮಾಡಲು ತೀರ್ಮಾನ ಮಾಡಲಾಗಿದ್ದು ಒಂದು ವಾರದ ಬಳಿಕ ಕೊವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.
ಇನ್ನು ಚಿಕ್ಕಮಗಳೂರು, ಕೋಲಾರ, ಮೈಸೂರು, ಶಿವಮೊಗ್ಗ, ಕಲಬುರ್ಗಿಯಲ್ಲಿ ಪ್ರಮಾಣ 1.5 ಕ್ಕಿಂತ ಕಡಿಮೆ ಇದ್ದು ಅಲ್ಲಿ ವಿಕೇಂಡ್ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದರು.
Comments are closed.