ಬೆಂಗಳೂರು: ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5ರಿಂದ 8ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು ಕರಾವಳಿ ಸಹಿತ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸೆ.5, 6 ಮತ್ತು 7ರಂದು ಆರೆಂಜ್ ಅಲರ್ಟ್ ಹಾಗೂ ಸೆ.8ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಸೆ.6, 7 ಮತ್ತು 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸೆ.5, 6 ಮತ್ತು 7ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Comments are closed.