ಕರಾವಳಿ

ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಡಿಸಿ ಕೂರ್ಮಾರಾವ್‌ ಎಂ ಆದೇಶ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಾಸಿಟಿವ್ ರೇಟ್ 2ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿದ್ದು, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.
ಅದರಂತೆ ಉಡುಪಿಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಜ್ಞರ ಸಮಿತಿ ಸಭೆ ನಡೆಸಿದ್ದು ಡಿಸಿ ಕೂರ್ಮಾರಾವ್‌ ಅವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ್ದಾರೆ. ಉಳಿದಂತೆ ಎಲ್ಲಾ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ ಎಂದವರು ಹೇಳಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆಯಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು, ಸ್ಯಾನಿಟೈಸಿಂಗ್ ವ್ಯವಸ್ಥೆ ಜನರು ಮಾಡಿಕೊಳ್ಳಬೇಕು. ಕೇರಳದಿಂದ ಜಿಲ್ಲೆಗೆ ಬರುವ ಮತ್ತು ಇಲ್ಲಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳು ಅಕ್ಟೋಬರ್ ತನಕ ಹೋಗುವುದು ಮತ್ತು ಬಾರದಿರುವುದು ಉತ್ತಮ ಎಂದು ಸರಕಾರ ನೀಡಿದ ಸಲಹೆ ಹಾಗೂ ಮಾರ್ಗಸೂಚಿ ಪಾಲನೆ ಮಾಡಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Comments are closed.