ಕರಾವಳಿ

ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಂದು ಉಡುಪಿಯಲ್ಲಿ ವ್ಯವಸ್ಥೆ

Pinterest LinkedIn Tumblr

ಮಂಗಳೂರು/ಉಡುಪಿ: ಹಿರಿಯ ಕಾಂಗ್ರೆಸ್ ಮುಖಂಡ, 4 ದಶಕಗಳ ಕಾಲ ಸಂಸದರಾಗಿ, 2 ಬಾರಿ ಕೇಂದ್ರ ಸಚಿವರಾಗಿದ್ದ ಹಾಗೂ ದೆಹಲಿ ಹಾಗೂ ಕರ್ನಾಟಕ ಕಾಂಗ್ರೆಸ್ ನ ಮಧ್ಯೆ ಕೊಂಡಿಯಂತೆ ಕೆಲಸ ಮಾಡುತ್ತಿದ್ದ ಆಸ್ಕರ್ ಫೆರ್ನಾಂಡೀಸ್ ಸೆ.13 ರಂದು ಕೊನೆಯುಸಿರೆಳೆದಿದ್ದಾರೆ. ಆಸ್ಕರ್‌ ಅವರ ನಿಧನಕ್ಕೆ ಸಾವಿರಾರು ಕಾರ್ಯಕರ್ತರು, ನೂರಾರು ನಾಯಕರು ಕಂಬನಿ ಮಿಡಿದಿದ್ದಾರೆ.

ಆಸ್ಕರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9.30ಕ್ಕೆ ಮಂಗಳೂರಿನಿಂದ ಉಡುಪಿಗೆ ಕೊಂಡೊಯ್ಯಲಾಗುತ್ತಿದ್ದು ಉಡುಪಿಯ ಚರ್ಚ್ ನಲ್ಲಿ ಪ್ರಾರ್ಥನೆ ಮಾಡಲಾಗುತ್ತದೆ. ಬೆಳಗ್ಗೆ 10.30ರಿಂದ 2.30ರವರೆಗೆ ಉಡುಪಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ನಲ್ಲಿ ಪೂಜೆ ಸಲ್ಲಿಸಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಪಾರ್ಥಿವ ಶರೀರ ಶಿಫ್ಟ್ ಮಾಡಿ ಸೆಪ್ಟೆಂಬರ್15 ರಂದು ಬೆಂಗಳೂರಿಗೆ ಮೃತದೇಹ ರವಾನಿಸಲಾಗುತ್ತದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನ ನಡೆಯಲಿದ್ದು ರಾಜ್ಯ ಹಾಗೂ ರಾಷ್ಟ್ರ ನಾಯಕರು ಆಸ್ಕರ್ ಅವರ ಅಂತಿಮ ದರ್ಶನ ಪಡೆಯುವ ಸಾಧ್ಯತೆ ಇದೆ. ಬಳಿಕ ಬೆಂಗಳೂರಿನ ಸೇಂಟ್‌ ಪ್ಯಾಟ್ರಿಕ್ಸ್ ಚರ್ಚ್ ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

 

Comments are closed.