ಮಂಗಳೂರು: ದುಬೈಯಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕನೋರ್ವವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಆತನಿಂದ 293.620 ಗ್ರಾಂ ತೂಕದ 13,88,823 ರೂ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಸೆ. 21ರಂದು ಮಧ್ಯಾಹ್ನ ದುಬೈಯಿಂದ ವಿಮಾನದ ಮೂಲಕ ಆಗಮಿಸಿದ ಈತ ಕಪ್ಪು ಬಣ್ಣದ ಬಟ್ಟೆ ಹಾಗೂ ಕೆಂಪು ಬಣ್ಣದ ಬ್ಲ್ಯಾಂಕೆಟ್‌ನಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲವು ದಿನಗಳ ಅಂತರದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಮ್ಸ್ ಅಧಿಕಾರಿಗಳು ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Comments are closed.