ಕರಾವಳಿ

ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ

Pinterest LinkedIn Tumblr

ಉಡುಪಿ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 11 ಸೋಮವಾರ ಸಂಜೆ ಉಡುಪಿ ಜಿಲ್ಲೆ ಶಿರ್ವದಲ್ಲಿ ನಡೆದಿದೆ. ಮೃತರನ್ನು ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57)ಎಂದು ಗುರುತಿಸಲಾಗಿದೆ. ಮೃತರು ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸೈಮನ್ ಡಿಸೋಜ ಸೋಮವಾರ ಸಂಜೆ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌದಿಯಲ್ಲಿ ಸುಮಾರು 25 ವರ್ಷಗಳ ಕಾಲ ಸಾಫ್ಟ್ ವೇರ್ ಉದ್ಯಮಿಯಾಗಿದ್ದ ಅವರು ವಿದೇಶದಿಂದ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಪಾಂಬೂರು ಮಾನಸ ಪುನರ್ವಸತಿ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿದ್ದು, ಕೇಂದ್ರದ ಉನ್ನತಿಗಾಗಿ ಶ್ರಮಿಸಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳದವರು ಆಗಮಿಸಿ ಬಾವಿಯಿಂದ ಮೃತದೇಹ ಹೊರಗೆ ತೆಗೆದಿದ್ದಾರೆ.

ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Comments are closed.