ಕರಾವಳಿ

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ: ಮಾರಿಯಮ್ಮ ದೇವಿ ದರ್ಶನ

Pinterest LinkedIn Tumblr

ಉಡುಪಿ: ಜಿಲ್ಲೆಯ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅ.13 ಬುಧವಾರ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನೀಲ್ ಕುಮಾರ್, ಶಾಸಕ‌ ಲಾಲಾಜಿ ಆರ್. ಮೆಂಡನ್, ಪಕ್ಷದ ಮುಖಂಡ ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Comments are closed.