ಕರಾವಳಿ

ಉಡುಪಿಯಲ್ಲಿ ‘ದುರ್ಗಾ ದೌಡ್’ ಪಾದಯಾತ್ರೆ ನಡೆಸಿದ ಹಿಂಜಾವೇ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

Pinterest LinkedIn Tumblr

ಉಡುಪಿ: ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ನಡೆದ ದುರ್ಗಾ ದೌಡ್ ಪಾದಯಾತ್ರೆಗೆ ಯಾವುದೇ ಪೂರ್ವಾನುಮತಿ ಪಡೆದಿಲ್ಲ ಎಂದು ಆರೋಪಿಸಿ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅ.15 ರಂದು ಸಂಜೆ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರು ಯಾವುದೇ ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ಪಾದಯಾತ್ರೆಯನ್ನು ನಡೆಸಿ ಕೋವಿಡ್‌-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೆ, ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ದೂರಿನನ್ವಯ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆಯಕ್ಟ್ 2020 ರಂತೆ ಪ್ರಕರಣ ದಾಖಲಿಸಲಾಗಿದೆ.

Comments are closed.