ಕರಾವಳಿ

ಮಂಗಳೂರಿನ ಬಲ್ಲಾಳ್ ಭಾಗ್’ನಲ್ಲಿ ಗುಂಪುಗಳ ನಡುವೆ ಹೊಡೆದಾಟ: ಏಳು ಮಂದಿ ಬಂಧನ

Pinterest LinkedIn Tumblr

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ‌ಮಂಗಳೂರು ನಗರದ ಬಲ್ಲಾಳ್ ಭಾಗ್ ಸಮೀಪ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದು, ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ವಿಚಾರ ತಿಳಿದ ಬರ್ಕೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗಲಾಟೆ ಬಿಡಿಸಲು ಹೋದ ಮಹಿಳಾ ಪೊಲೀಸ್ ಅಧಿಕಾರಿ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಘಟನೆ ವೇಳೆ ಏಳು ವಾಹನಗಳಿಗೆ ಹಾನಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಏಳು ಮಂದಿಯನ್ನು ಬಂಧಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments are closed.