ಕರಾವಳಿ

ಹೊರನಾಡು ಕನ್ನಡಿಗ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ: ವಕ್ವಾಡಿಯಲ್ಲಿ ಅಭಿಮಾನಿಗಳ ಸಂಭ್ರಮ

Pinterest LinkedIn Tumblr

ಕುಂದಾಪುರ: ಕಳೆದ 30 ವರ್ಷದಿಂದ ದುಬೈನಲ್ಲಿ ಉದ್ಯಮ ಸ್ಥಾಪಿಸಿ ಹೊರನಾಡು ಕನ್ನಡಿಗನಾಗಿದ್ದು ಕನ್ನಡಿಗರಿಗೆ ಅಗತ್ಯ ಸಹಾಯ ಮಾಡುತ್ತಿರುವ ದುಬೈ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ಅವರಿಗೆ 2021ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಹುಟ್ಟೂರಿನಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದರು.

ಭಾನುವಾರ ಸಂಜೆ ವೇಳೆ ಪ್ರಶಸ್ತಿ ಆಯ್ಕೆ ಬಗ್ಗೆ ಪ್ರಕಟವಾಗುತ್ತಲೇ ಹುಟ್ಟೂರಾದ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಅಭಿಮಾನಿಗಳು, ಹಿತೈಷಿಗಳು ಪಟಾಕಿ‌ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪ್ರವೀಣ್ ಕುನಾರ್ ಶೆಟ್ಟಿ ಸಣಗಲ್ ಮನೆ, ಪ್ರಮೋದ್ ಶೆಟ್ಟಿ, ಕೀರ್ತಿ ಶೆಟ್ಟಿ, ಅಶೋಕ್ ಪೂಜಾರಿ, ವಕ್ವಾಡಿ ಫ್ರೆಂಡ್ಸ್ ವಕ್ವಾಡಿ ಸದಸ್ಯರು ಹಾಗೂ ಸ್ಥಳೀಯರು ಇದ್ದರು.

 

Comments are closed.