ಮಂಗಳೂರು: ಸೋಮವಾರ ದೆಹಲಿಯಲ್ಲಿ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ದಿಲ್ಲಿಗೆ ಪಯಣಿಸಿದ ಹಾಜಬ್ಬ….
ಹಾಜಬ್ಬ ಅವರು ನ. 7ರಂದು ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿ ಅಲ್ಲಿಂದ ಹೊಸದಿಲ್ಲಿಗೆ ಮಧ್ಯಾಹ್ನ ತಲುಪಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಿಂದ ಸಂಸದ ನಳಿನ್ ಕುಮಾರ್ ಕಟೀಲು ಅವರ ದಿಲ್ಲಿ ಕಚೇರಿಯ ಅಪ್ತಸಹಾಯಕ ಹೊಟೇಲ್ ಅಶೋಕಕ್ಕೆ ಕರೆದುಹೋಗಿದ್ದು ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಹಾಜಬ್ಬರ ಜತೆ ಅವರ ಸಹೋದರನ ಪುತ್ರ ತೆರಳಿದ್ದಾರೆ. ಹಾಜಬ್ಬ ಅವರು ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಸೋಮವಾರವೇ ದಿಲ್ಲಿಯಿಂದ ಹೊರಟು ಬೆಂಗಳೂರು ಮೂಲಕ ಮಂಗಳೂರಿಗೆ ಮಂಗಳವಾರ ಆಗಮಿಸಲಿದ್ದಾರೆ. ಅವರ ಎಲ್ಲ ಖರ್ಚುವೆಚ್ಚಗಳನ್ನು ಕೇಂದ್ರ ಸರಕಾರ ಭರಿಸುತ್ತಿದೆ.
ಹಾಜಬ್ಬ ಅವರು ರವಿವಾರ ವಿಮಾನ ನಿಲ್ದಾಣಕ್ಕೆ ತೆರಳಲು ದ.ಕ. ಜಿಲ್ಲಾಡಳಿತ ವಾಹನ ವ್ಯವಸ್ಥೆ ಮಾಡಿತ್ತು. ಮಂಗಳವಾರ ಬೆಳಗ್ಗೆಯೂ ಜಿಲ್ಲಾಡಳಿತವೇ ವಾಹನ ವ್ಯವಸ್ಥೆ ಮಾಡಲಿದೆ.
Comments are closed.