ಕರಾವಳಿ

ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Pinterest LinkedIn Tumblr

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ರೂ 13.75 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ನಾವೂರು ನಿವಾಸಿ ಮಹಮ್ಮದ್‌ ಸ್ವಾಲಿ (26), ಲಾಯಿಲಾ ನಿವಾಸಿ ಯಾಹ್ಯಾ (32) ಮತ್ತು ನಾವೂರು ನಿವಾಸಿ ಬಿ ಹೆಚ್‌ ನೌಫಲ್‌ (27) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು, 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು 13,75,930 ರೂ. ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನಾವಾನೆ ಋಷಿಕೇಶ್ ಭಗವಾನ್ , ಹೆಚ್ಚುವರಿ ಎಸ್ಪಿ ಶಿವಕುಮಾರ್ ಗುಣಾರೆ ನಿರ್ದೇಶನದಂತೆ, ಬಂಟ್ವಾಳ ಡಿವೈಎಸ್ಪಿ ಶಿವಾಂಶು ರಜಪೂತ್ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್, ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ , ದೇವಪ್ಪ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ, ಇಬ್ರಾಹಿಂ ಗರ್ಡಾಡಿ, ಲತೀಫ್, ವಿಜಯ ಕುಮಾರ್ ರೈ, ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ,ಸಂಪತ್ ಕುಮಾರ್ ಭಾಗವಹಿಸಿದ್ದರು.

 

Comments are closed.