ಉಡುಪಿ: ತೀರ್ಥಹಳ್ಳಿಯ ಬೆಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟವನ್ನು ತಡೆಯಲೆತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತ ರ ಮೇಲೆ ವಾಹನ ಚಲಾಯಿಸಿ ಮಾರಣಾಂತಿಕ ಹಲ್ಲೆ ದುಷ್ಕೃತ್ಯ ನಡೆಸಿರುವ ಘಟನೆಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಖೇದ ವ್ಯಕ್ತಪಡಿಸಿದ್ದಾರೆ.

(ವರದಿ- ಯೋಗೀಶ್ ಕುಂಭಾಸಿ)
ಈ ಘಟನೆ ನಿಜಕ್ಕೂ ಖಂಡನೀಯವಾಗಿದೆ. ಗೋರಕ್ಷಣೆಯ ಕಾರ್ಯಕ್ಕೆ ಈ ರೀತಿ ಸವಾಲೆಸೆಯುವ ದುರುಳರ ವಿರುದ್ಧ ಸರ್ಕಾರ ಗಂಭೀರ ಕ್ರಮಕೈಗೊಳ್ಳಬೇಕು. ಗೋಹತ್ಯಾ ನಿಷೇಧ ಕಾನೂನು ಕೇವಲ ಜಾರಿಗೆ ತಂದು ಪ್ರಯೋಜನವಿಲ್ಲ. ಅದರ ಪರಿಣಾಮಕಾರಿ ಅನುಷ್ಠಾನ ಆಗಬೇಕು. ಸರ್ಕಾರಗಳು ಈ ಬಗ್ಗೆ ಪೂರ್ಣ ಇಚ್ಛಾಶಕ್ತಿ ತೋರಬೇಕು. ಇತ್ತೀಚಿನ ದಿನಗಳಲ್ಲಂತೂ ಗೋಹತ್ಯೆ , ಗೋಸಾಗಾಟಗಳು ಯಾವುದೇ ಮುಲಾಜಿಲ್ಲದೇ ನಡೆಯುತ್ತಿರುವುದು ತೀರಾ ಆತಂಕಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಗೋವಿನ ಸಂಕುಲ ಉಳಿಸಲು ಇಡೀ ಸಮಾಜ ಕಠಿಬದ್ಧರಾಗಲೇಬೇಕು. ಗೋವುಗಳನ್ನು ರಕ್ಷಿಸಲು ಸರ್ಕಾರ ತುರ್ತಾಗಿ ಮುಂದಾಗಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾವೆಚ್ಚವನ್ನು ಸರ್ಕಾರ ನೋಡಿಕೊಳ್ಳಬೇಕು. ಈ ಕಾರ್ಯಕರ್ತರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.
Comments are closed.