ಕರಾವಳಿ

ದಕ್ಷಿಣಕನ್ನಡ ಜಿಲ್ಲೆಗೆ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಗಾಗಿ ಸರ್ಕಾರಕ್ಕೆ ಪ್ರಸ್ತಾವನೆ: ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಗೆ ಜಿನೋಮ್ ಸೀಕ್ವೆನ್ಸಿಂಗ್ ಸೌಲಭ್ಯವನ್ನು ಒದಗಿಸುವ ಬೇಕಾಗಿರುವ ಅಗತ್ಯತೆಗಳ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರಿಗೆ ಸೂಚಿಸಿದೆ.

ಭಾರತೀಯ SARS-Cove-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಮಾರ್ಗಸೂಚಿಗಳಿಗೆ ಅನುಗುಣವಾಗಿ ಜಿಲ್ಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ತೆರೆಯಲು ಜಿಲ್ಲಾಡಳಿತ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ

ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಬೆಂಗಳೂರಿಗೆ ಕಳುಹಿಸಲಾದ 120 ಮಾದರಿಗಳಲ್ಲಿ 34 ಮಾತ್ರ ಫಲಿತಾಂಶ ನೀಡಿವೆ. ಉಳಿದ 86 ಮಾದರಿಗಳ ಫಲಿತಾಂಶಕ್ಕಾಗಿ ಜಿಲ್ಲೆ ಕಾಯುತ್ತಿದೆ. ಈ ಹಿಂದೆ ಬೆಂಗಳೂರು ಪ್ರಯೋಗಾಲಯದ ಮೇಲೆ ಹೆಚ್ಚಿನ ಒತ್ತಡ ಇರಲಿಲ್ಲ. ಆದರೆ ಒಮಿಕ್ರಾನ್ ಬಳಿಕ ಪರಿಸ್ಥಿತಿ ಬದಲಾಗಿದ್ದು ಈ ಸಂಬಂಧ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚಿಸಿದ್ದು

ದಕ್ಷಿಣ ಕನ್ನಡ ಸೇರಿದಂತೆ ದಕ್ಷಿಣ ಕರ್ನಾಟಕದ ಅಗತ್ಯತೆಗಳನ್ನು ಪೂರೈಸಲು ಹಾಸನ ಅಥವಾ ಮಂಗಳೂರಿನಲ್ಲಿ ಲ್ಯಾಬ್ ಸ್ಥಾಪಿಸಲು ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಅವರು ಹೇಳಿದ್ದಾರೆ.

 

Comments are closed.