ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬಿಕರು ದೂರಿದ್ದಾರೆ.
ವಿಟ್ಲ ಮೂಲದ ಗರ್ಭಿಣಿ ಸವಿತಾ (33) ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಆಗ ಸಂಬಂಧಿಕರು ವೈದ್ಯರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ಮೃತ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣವಾಗಿದ್ದು, ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವೈದ್ಯರ ಜತೆ ಮಾತನಾಡುವಂತೆ ಸೂಚಿಸಿದ್ದೇನೆ. ಅವರು ವೈದ್ಯರೊಂದಿಗೆ ಮಾತನಾಡಿದ ಅನಂತರ ನೀಡುವ ದೂರಿನಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Comments are closed.