ಕರಾವಳಿ

ಹಾಸ್ಟೆಲಿನಲ್ಲಿ ರ್‍ಯಾಗಿಂಗ್?; ವಿದ್ಯಾರ್ಥಿಗೆ ಥಳಿಸಿದ ಆರೋಪದಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಕೇಸ್ ದಾಖಲು..!

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆ ಕೋಟ ಸಮೀಪದ ಅಚ್ಲಾಡಿ ಎಂಬಲ್ಲಿನ ಈಸಿಆರ್ ಇನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡಿ ಕಾಲೇಜ್‌ಗೆ ಸಂಬಂದಪಟ್ಟ ವಕ್ವಾಡಿಯಲ್ಲಿರುವ ಹಾಸ್ಟೆಲ್‌ನಲ್ಲಿ ರ್‍ಯಾಗಿಂಗ್ ನಡೆದಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಓರ್ವ ವಿದ್ಯಾರ್ಥಿ ಮೇಲೆ ಗಂಬೀರ ಹಲ್ಲೆ ನಡೆಸಿದ್ದು, ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ವಿದ್ಯಾರ್ಥಿಗಳಾದ ದಿಲ್ಶಾದ್ ಮತ್ತು ಶಿಂಟೊ ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಎನ್ನಲಾಗಿದೆ. ದುರ್ಗಾದಾಸ್ ಗಂಬೀರ ಗಾಯಗೊಂಡ ವಿದ್ಯಾರ್ಥಿ. ಹಾಸ್ಟೆಲ್‌ನಲ್ಲಿ ಹಲ್ಲೆ ನಡೆಸಿದ ಇಬ್ಬರು ವಿದ್ಯಾರ್ಥಿಗಳ ಕಿರಿಯ ವಿದ್ಯಾರ್ಥಿಗಳಿಗೆ ರ್‍ಯಾಗಿಂಗ್ ಮಾಡುತ್ತಿದ್ದರು ಎನ್ನಲಾಗಿದೆ.

ಹಲ್ಲೆ ನಡೆಸಿದ ಇಬ್ಬರು ವಿದ್ಯಾರ್ಥಿಗಳ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಾಗಿದೆ.

Comments are closed.