ಕರಾವಳಿ

ಆಂತರಿಕ ಸುರಕ್ಷತೆಯ ಮೇಲೆ ಮುಸ್ಲಿಂ ಮತಾಂಧರ ದಾಳಿ ಆರೋಪ : ಉನ್ನತಮಟ್ಟದ ತನಿಖೆಗೆ ಆಗ್ರಹ

Pinterest LinkedIn Tumblr

ಮಂಗಳೂರು : ಇತ್ತೀಚಿಗೆ ಆಂತರಿಕ ಸುರಕ್ಷತೆಯ ಮೇಲೆ ಮುಸ್ಲಿಂ ಮತಾಂಧರ ದಾಳಿ ಹೆಚ್ಚಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ಮಂಗಳೂರಿನಲ್ಲಿ NRC ಪ್ರತಿಭಟನೆಯ ವಿಷಯದಲ್ಲಿ ಬಂದರು ಪೋಲೀಸರ ಮೇಲೆ ದಾಳಿ ನಡೆಸಿ ಪೊಲೀಸ್ ಠಾಣೆಗೆ ಬೇಕಿ ಹಚ್ಚಲು ಪ್ರಯತ್ನಿಸಿದ್ದರು.. ಮುಂದುವರಿದು ಬೆಂಗಳೂರಿನ ಡಿಜೆ ಹಳ್ಳಿ ಕೆಜೆಹಳ್ಳಿ ಪೊಲೀಸ್ ಠಾಣೆಗೆ ದಾಳಿ ನಡೆಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ,ಪ್ರತಿಭಟನೆಯ ನೆಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದಾಳಿ ನಡೆಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ, ಈಗ ಯಾವುದೋ ಕ್ಷುಲ್ಲಕ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ದಾಳಿ ನಡೆಸಿ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದಾರೆ.

ಆಂಜನೇಯ ದೇವಸ್ಥಾನದದ ಮೇಲೆ ಕಲ್ಲುತೂರಾಟ ನಡೆಸಿದಲ್ಲದೆ ದೇವಸ್ಥಾನವನ್ನು ದ್ವಂಸಗೊಳಿಸಲು ಯತ್ನಿಸಿದ್ದಾರೆ, ಹಿಂದೂ ಮನೆಗಳಿಗೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಅಸ್ತಿ ಪಾಸ್ತಿ ನಷ್ಟ ಮಾಡಿದ್ದಾರೆ.

ಇದೊಂದು ಇಸ್ಲಾಂ ಜಿಹಾದಿ ಮಾನಸಿಕತೆಯನ್ನು ಬಿಂಬಿಸುತ್ತದೆ. ಇದೊಂದು ಭಯೋತ್ಪಾದಕ ರೀತಿಯ ಕೃತ್ಯವಾಗಿದ್ದು, ಕರ್ನಾಟಕದ ಅಂತರಿಕ ಸುರಕ್ಷತೆ ಕಾಪಾಡುತ್ತಿರುವ ಪೊಲೀಸ್ ಇಲಾಖೆಗೆ ಸವಾಲೆಸಿದಿದ್ದರೆ.

ತಕ್ಷಣ ಸರಕಾರ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಅಗ್ರಹಿಸುತ್ತೆನೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.

Comments are closed.