
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವವನ್ನು 2022ನೇ ಏ.23ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳ ಸಭಾಂಗಣ ಮಂಗಳಗಂಗೋತ್ರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸರ್ವೋಚ್ಚ ನ್ಯಾಯಾಲಯ ನ್ಯಾಯಧೀಶರಾದ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಅವರು ಘಟಿಕೋತ್ಸವ ಭಾಷಣ ಮಾಡುವರು.
ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿರುವರು.
ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‍ನಾರಾಯಣ್ ಸಿ.ಎನ್., ಉಪಸ್ಥಿತರಿರುವರು ಎಂದು ಮಂಗಳೂರು ವಿಶ್ವವಿದ್ಯಾನಿಲದ ಕುಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.