ಬೈಂದೂರು: ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರವಾಸೋಧ್ಯಮದ ಕುರಿತು ಚರ್ಚಿಸಿದರು.

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಸುತ್ತುವರಿದಿದೆ. ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಏಜೆನ್ಸಿಗಳಿಗೆ ನೆರವು’ ಅಡಿಯಲ್ಲಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಬೈಂದೂರು ಇದರ ಅಭಿವೃದ್ಧಿಗೆ ರೂ 14.00 ಕೋಟಿ ಅನುದಾನ ಮಂಜೂರು ಮಾಡಲು ಕೋರಿದರು.
ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಯೋಜನೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.