ಕರಾವಳಿ

ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ನ.28ಕ್ಕೆ ಉಡುಪಿ ಜಿಲ್ಲೆಯ ಮೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

Pinterest LinkedIn Tumblr

ಉಡುಪಿ: ನ.28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಪ್ರಧಾನ ಮಂತ್ರಿಗಳ ಉಡುಪಿ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕುಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದ್ದು ಪ್ರಸ್ತುತ ನೀಡಿರುವ ರಜೆ ಅವಧಿಯನ್ನು ನಿರ್ವಹಿಸಬೇಕಾದ ಪಠ್ಯವನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Comments are closed.