ಕರ್ನಾಟಕ

ಸಿಎಂ ಹುದ್ದೆಯಿಂದ ಅರ್ಧಕ್ಕೆ ನಿರ್ಗಮಿಸಿದ್ದರಿಂದ ರಾಜ್ಯ ಅಭಿವೃದ್ಧಿಗೊಳಿಸುವ ಆಸೆ ಈಡೇರಲಿಲ್ಲ: ಯಡಿಯೂರಪ್ಪ

Pinterest LinkedIn Tumblr

yad

ಶಿವಮೊಗ್ಗ, ಸೆ. 14: ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ತಮ್ಮ ಆಸೆಗೆ ಈ ಹಿಂದೆ ಕೆಲವರು ನೀರೆರಚಿದರು. ಅವಕಾಶ ನೀಡಲಿಲ್ಲ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರೂ ಆದ ಲೋಕಸಭಾ ಸದಸ್ಯ ಬಿ.ಎಸ್.ಯಡಿ ಯೂರಪ್ಪ ತಿಳಿಸಿದ್ದಾರೆ.

ರವಿವಾರ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಸುವರ್ಣ ಮಹೋ ತ್ಸವ ವರ್ಷದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ತಮ್ಮನ್ನು ಅರ್ಧಕ್ಕೆ ಮುಖ್ಯಮಂತ್ರಿ ಹುದ್ದೆ ಯಿಂದ ಕೆಳಗಿಳಿಸಿದ ಘಟನೆ ಪರೋಕ್ಷ ವಾಗಿ ಪ್ರಸ್ತಾಪಿಸಿ, ವಿಷಾದ ವ್ಯಕ್ತಪಡಿಸಿದರು.

ತಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕೈಗಾರಿಕಾ ಕ್ಷೇತ್ರದಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಹಲವು ಕ್ರಮಕಗಳನ್ನು ಕೈಗೊಂಡಿದ್ದೆ. ಆದರೆ ಇದು ಪೂರ್ಣಗೊಳಿಸಲು ಸಾಧ್ಯ ವಾಗಲಿಲ್ಲ. ಕೆಲವರು ಇದಕ್ಕೆ ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ರಾಜ್ಯದ ಅಭಿವೃದ್ಧಿಯ ವಿಷಯದಲ್ಲಿ ತಾನು ಯಾವುದೇ ರಾಜಕಾರಣ ಮಾಡಲು ಹೋಗುವುದಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಎಲ್ಲ ರೀತಿಯ ನೆರವು ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳುತ್ತೇನೆ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.

ಪ್ರಗತಿಯತ್ತ:
ಲೋಕಸಭೆ ಚುನಾವ ಣೆಗೆ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಭರವಸೆ ಯಂತೆ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಸುಮಾರು 100 ದಿನಗಳಲ್ಲಿಯೇ ದೇಶದ ಆರ್ಥಿಕ ಸ್ಥಿತಿಗತಿ ಸುಧಾರಣೆಯ ಹಂತಕ್ಕೆ ಬಂದಿದೆ ಎಂದು ಯಡಿಯೂ ರಪ್ಪ ತಿಳಿಸಿದರು.

ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ಸಿಗಬೇಕಾದ ಎಲ್ಲ ರೀತಿಯ ನೆರವು ದೊರಕಿಸಿ ಕೊಡುತ್ತೇನೆ. ಈ ಸಂಬಂಧ ಕೇಂದ್ರ ಸರಕಾರದ ಸಂಬಂಧಿಸಿದ ಸಚಿವ ರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಹೇಳಿದರು.

ಶಿವಮೊಗ್ಗ ನಗರದ ಹಳೆಯ ಕಾರಾಗೃಹವನ್ನು ನಗರದ ಹೊರವಲಯ ದಲ್ಲಿ ನಿರ್ಮಾಣ ಮಾಡಿರುವ ನೂತನ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತಿದೆ. ಹಳೆ ಕಾರಾಗೃಹದ ಸ್ಥಳವನ್ನು ಸಾರ್ವ ಜನಿಕರ ಉಪಯೋಗಕ್ಕೆ ಮೀಸಲಿಡಬೇ ಕೆಂದು ನಿರ್ಧರಿಸಲಾಗಿದೆ. ಆದರೆ ಈ ನಿಟ್ಟಿನಲ್ಲಿ ಯಾರೂ ಕೈ ಜೋಡಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಮಹೇಂದ್ರಪ್ಪ, ಎಲ್.ರುದ್ರೇ ಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Write A Comment