ಕರ್ನಾಟಕ

ಉ.ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ : ಉಮೇಶ್ ಕತ್ತಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

Pinterest LinkedIn Tumblr

siddu

ಮೈಸೂರು, ಸೆ.14: ಉತ್ತರ ಕರ್ನಾಟಕವನ್ನು ಸಮಗ್ರ ಕರ್ನಾಟಕದಿಂದ ಬೇರ್ಪಡಿಸುವ ಅಥವಾ ವಿಭಜನೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ರವಿವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವ ರು, ಉತ್ತರ ಕರ್ನಾಟಕವನ್ನು ಪ್ರತ್ಯೇ ಕ ರಾಜ್ಯವನ್ನಾಗಿ ಮಾಡಬೇಕೆಂಬ ಶಾಸಕ ಉಮೇಶ್ ಕತ್ತಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿ ಸಿದರು. ಅನೇಕರ ಹೋರಾಟದ ಫಲವಾ ಗಿ ಕರ್ನಾಟಕ ರಾಜ್ಯ ರಚನೆಗೊಂಡಿದ್ದು, ಭಾಷಾವಾರು ಪ್ರಾಂತ್ಯ ದೇಶದಲ್ಲಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಜ್ಯ ರಚನೆಯ ಪ್ರಶ್ನೆಯೇ ಇಲ್ಲ. ಆದ್ದರಿಂದ ಮಾಜಿ ಸಚಿವ ಉಮೇಶ್ ಕತ್ತಿ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು. ಇದೊಂದು ಜವಾಬ್ದಾರಿ ಇಲ್ಲದ ಹೇಳಿಕೆ ಎಂದು ಕಿಡಿಕಾರಿದರು.

ಅಲ್ಲದೆ, ಮಹಾರಾಷ್ಟ್ರದಲ್ಲಿ ಶಿವಸೇನೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಭಾಗಗಳನ್ನು ವಶಕ್ಕೆ ಪಡೆ ಯುವುದಾಗಿ ರಾಜ್‌ಠಾಕ್ರೆ ಹೇಳಿಕೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಬೆಳಗಾವಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮವಾಗಿದೆ. ಈ ಬಗ್ಗೆ ಪದೇ ಪದೇ ಚರ್ಚೆ ಮಾಡುವ ಅಗತ್ಯವಿಲ್ಲ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಅಲ್ಲಿ ಮರಾಠಿ ಮಾತನಾಡುವವರಿದ್ದರೂ ಅವರು ಕನ್ನಡಿಗರಾಗಿದ್ದಾರೆ. ಹೀಗಾಗಿ ರಾಜಠಾಕ್ರೆ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಹೇಳಿದರು.

ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಎಚ್.ಕೆ.ಪಾಟೀಲ್, ಎಚ್.ಎಸ್. ಮಹದೇವ ಪ್ರಸಾದ್, ಕಾಂಗ್ರೆಸ್ ನಗರಾಧ್ಯಕ್ಷ ಸಿ.ದಾಸೇಗೌಡ ಮತ್ತಿತರರು ಈ ಸಂದರ್ಭದಲ್ಲಿದ್ದರು.

Write A Comment