ಕರ್ನಾಟಕ

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಬದ್ಧ: ಸಚಿವ ಜಯಚಂದ್ರ

Pinterest LinkedIn Tumblr

anjaneya

ಬೆಂಗಳೂರು, ಸೆ.14: ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನದ ವಿಚಾರದಲ್ಲಿ ರಾಜ್ಯ ಸರಕಾರ ಅತ್ಯಂತ ಪ್ರಾಮಾಣಿಕವಾಗಿದ್ದು, ಬಜೆಟ್‌ನಲ್ಲಿಯೂ ಒಂದು ಸಾವಿರ ಕೋಟಿ ರೂ.ಗಳನ್ನು ಮಿ ೀಸಲಿಡಲಾಗಿದೆ. ಆದು ದರಿಂದ, ಈ ಬಗ್ಗೆ ಯಾರಿಗೂ ಅನುಮಾನಗಳು ಬೇಡ ಎಂದು ಕಾನೂನು ಮತ್ತು ಸಂಸದೀಯ ವ್ಯಹವಾರಗಳ ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದ ಸೆಂಟ್ರಲ್ ಕಾಲೇಜಿನ ಸೆನೆಟ್ ಸಭಾಂಗಣದಲ್ಲಿ ಭದ್ರಾ ನೀರಾವರಿ ಹೋರಾಟ ಸಮಿತಿ ಆಯೋಜಿಸಿದ್ದ ‘ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಹಕ್ಕೊತ್ತಾಯ’ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ವಯ 400 ಎಕರೆ ಅರಣ್ಯ ಪ್ರದೇಶದಲ್ಲಿ ನೀರಿನ ಕಾಲುವೆ ಹರಿದು ಹೋಗುವುದರಿಂದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಅನುಮತಿ ಲಭ್ಯವಾಗಿಲ್ಲ. ಆದುದ ರಿಂದ, ಒಂದು ವಾರದೊಳಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲಿ್ಲ ಆ ಭಾಗದ ಜನಪ್ರತಿನಿಧಿಗಳ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.

ಅಗತ್ಯವಿದ್ದಲ್ಲಿ, ರ್ವಪಕ್ಷಗಳು ಹಾಗೂ ರೈತ ಮು ಖಂಡರ ನಿಯೋಗದೊಂದಿಗೆ ಪ್ರಧಾನಮಂತ್ರಿ ಯನ್ನು ಭೇಟಿ ಮಾಡಿ ಯೋಜನೆಯ ಅಗತ್ಯವನ್ನು ಮನವರಿಕೆ ಮಾಡಿ ಅನುಮತಿ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ತುಮಕೂರು, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯವನ್ನು ಒದಗಿಸಲು ಸರಕಾರ ಚಿಂತನೆ ನಡೆಸಿದೆ. ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಈಗಾಗಲೆ ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ನಮ್ಮ ಸರಕಾರ ನೀರಾವರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ನಮಗೆ ಸಾಮಾನ್ಯ ಜನರು, ರೈತರ ಹಿತ ಮುಖ್ಯ ಎಂದು ಅವರು ಹೇಳಿದರು.

ತುಮಕೂರು ಬ್ರಾಂಚ್ ಕೆನಾಲ್ ಕಾಮಗಾರಿಗೆ ಸಂ ಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾ ಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ರೈತರು-ಸಚಿವರ ನಡುವೆ ವಾಗ್ವಾದ: ಭದ್ರಾ ಮೇಲ್ದಂಡೆ ಅನುಷ್ಠಾನದಲ್ಲಾ ಗುತ್ತಿರುವ ವಿಳಂಬಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹಾಗೂ ರೈತರ ನಡುವೆ ಸಮಾವೇಶದಲ್ಲಿ ಕೆಲಕಾಲ ವಾಗ್ವಾದ ನಡೆದ ಘಟನೆ ಜರಗಿತು.

ಭದ್ರಾ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡಲು ನಮ್ಮ ಸರಕಾರ ಬದ್ಧವಾಗಿದೆ. ಬಜೆಟ್‌ನಲ್ಲಿಯೂ ಹಣ ಮೀಸಲಿಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿ ಸ್ಥಗಿತಗೊಂಡಿದೆ. ಅ ರಣ್ಯ ಮತ್ತು ರಿಸರ ಇಲಾಖೆಯಿಂದ ಅನುಮತಿ ಸಿಕ್ಕಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿ ಸಲಾ ಗುವುದು ಎಂದು ಸಚಿವ ಆಂಜನೇಯ ಹೇಳಿದರು.

ಸಚಿವರ ಹೇಳಿಕೆಯಿಂದ ಆಕ್ರೋಶಗೊಂಡ ರೈತರು, ಇಚ್ಛಾಶಕ್ತಿಯ ಕೊರತೆಯಿಂದ ಯೋಜನೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಸರಕಾರ ಉದ್ದೇಶಪೂರ್ವಕವಾಗಿ ಯೋಜನೆಯನ್ನು ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದರು.

ಸರಕಾರದ ವಿರುದ್ಧದ ಆರೋಪಗಳನ್ನು ನಿರಾಕ ರಿಸಿದ ಸಚಿವರು, ಕೇಂದ್ರ ಪರಿಸರ ಮತ್ತು ಅರಣ್ಯ ಇಲಾ ಖೆಯಿಂದ ಅನುಮತಿ ಪಡೆಯಲು ಸರಕಾರ ಪ್ರಯತ್ನ ನಡೆಸುತ್ತಿದೆ.

ನಮ್ಮ ರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಬೇಡ. ಕಾನೂನು ಹಾಗೂ ತಾಂತ್ರಿಕ ಸಮಸ್ಯೆಗಳಿಂದಾಗಿ ಯೋಜನೆ ವಿಳಂಬವಾಗಿ ದೆಯೇ ಹೊರತು, ಬೇರೆ ಯಾವುದೇ ಕಾರಣಗಳಿಲ್ಲ ಎಂದರು. ಸಚಿವರ ಉತ್ತರಿಂದ ಸಮಾಧಾನಗೊಳ್ಳದ ರೈತರು, ಧಿಕ್ಕಾರಗಳನ್ನು ಕೂಗುವುದು ಮುಂದುವರಿಸಿದರು.

ಇದರಿಂದ ಅಸಮಾಧಾನಗೊಂಡ ಸಚಿವರು, ತಮಗೆ ಬೇರೆ ಕಾರ್ಯಕ್ರಮವಿದ್ದು, ಅಲ್ಲಿಗೆ ತೆರಳಬೇಕು ಎಂದು ಸಭೆಯಿಂದ ಹೊರನಡೆಯಲು ಮುಂದಾದರು. ಆಗ ಸಚಿವ ಜಯಚಂದ್ರ, ಅಡ್ವೊಕೇಟ್ ಜನರಲ್ ಪ್ರೊ.ರವಿ ವರ್ಮಕುಮಾರ್, ಪತ್ರಕರ್ತ ಲಕ್ಷ್ಮಣ್ ಹೂಗಾರ್ ಅವರು ಸಚಿವರ ನೆರವಿಗೆ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Write A Comment