ಕರ್ನಾಟಕ

ನವೆಂಬರ್‌ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Pinterest LinkedIn Tumblr

KAGODU_THIMMA

ಬೆಂಗಳೂರು, ಸೆ. 18: ಬೆಳಗಾವಿಯ ಸುವರ್ಣ ಸೌಧದಲ್ಲಿ ನವೆಂಬರ್ ಮೊದಲನೆ ಅಥವಾ ಎರಡನೆ ವಾರದಲ್ಲಿ ಒಂದು ತಿಂಗಳ ಕಾಲ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ನಡೆಸುವ ಸಂಬಂಧ ಈಗಾಗಲೇ ಬೆಳಗಾವಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾ ಗಿದೆ ಎಂದರು.

ನವೆಂಬರ್ ತಿಂಗಳಲ್ಲಿ ಮದುವೆ ಮತ್ತಿತರ ಶುಭ ಸಮಾರಂಭಗಳು ನಡೆಯಲಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಮೊದಲೇ ಸೂಚಿಸಿದರೆ ಸಚಿವರು, ಶಾಸಕರು ಹಾಗೂ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಕೊಠಡಿ ಕಾಯ್ದಿರಿಸಲು ಅನುಕೂಲವಾಗಲಿದೆ ಎಂದು ಕೋರಿದ್ದಾರೆಂದು ಕಾಗೋಡು ತಿಳಿಸಿದರು.

ನವೆಂಬರ್ ತಿಂಗಳ ಮೊದಲ ವಾರದಲ್ಲಿ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಒಂದು ತಿಂಗಳ ಕಾಲ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಸರಕಾರದ ಮಟ್ಟದಲ್ಲಿ ಅಧಿವೇಶನ ದಿನಾಂಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕಿದ್ದು, ಶೀಘ್ರದಲ್ಲೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಶಾಸಕರ ಭವನ ನಿರ್ಮಾಣ: ಬೆಳಗಾವಿಯ ಸುವರ್ಣಸೌಧದ ಬಳಿ 200 ಕೊಠಡಿಗಳ ಶಾಸಕರ ಭವನ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಶೀಘ್ರದಲ್ಲೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದ ಅವರು, ಈ ಭವನವನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ಹಾಗೂ ಖಾಸಗಿ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

‘ಪ್ರತ್ಯೇಕ ರಾಜ್ಯದ ಕುರಿತು ಹೇಳಿಕೆ ನೀಡಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಉಮೇಶ್ ಕತ್ತಿ ತನ್ನ ಹೇಳಿಕೆಯನ್ನು ಕೂಡಲೇ ಹಿಂಪಡೆಯ ಬೇಕು. ರಾಜ್ಯದ ಜನತೆಯ ಜೊತೆ ಹೊಂದಾಣಿಕೆಯಿಂದ ಬದುಕು ನಡೆಸುವುದನ್ನು ರೂಢಿಸಿಕೊಳ್ಳಬೇಕು. ರಾಜ್ಯ ವಿಭಜನೆಯಂತಹ ವಿಷಬೀಜ ಬಿತ್ತುವ, ಜನರನ್ನು ಕೆರಳಿಸುವ ಹೇಳಿಕೆ ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಬೇಜವಾಬ್ದಾರಿಯ ಹೇಳಿಕೆ ನೀಡುವುದು ಸಲ್ಲ.’

Write A Comment