ಕರ್ನಾಟಕ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಜನಾಭಿಪ್ರಾಯ ಸಂಗ್ರಹಿಸಿ ತೀರ್ಮಾನ: ಉಮಾಶ್ರೀ

Pinterest LinkedIn Tumblr

mob

ಬೆಂಗಳೂರು, ಸೆ.22: ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಮಾಡುವಂತೆ ಒತ್ತಾಯ ಬಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.ಸೋಮವಾರ ನಗರದ ಕ್ವೀನ್ಸ್ ರಸ್ತೆಯ ಲ್ಲಿರುವ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿ ಸುತ್ತಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಲಾ, ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಮಾಡುವಂತೆ ಮಹಿಳಾ ಸಂಘಟನೆಗಳಿಂದ ಒತ್ತಾಯ ಬಂದಿದೆ. ಆದರೆ, ಈ ಬಗ್ಗೆ ಏಕಾಏಕಿ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಜನಾಭಿಪ್ರಾಯ ಸಂಗ್ರ ಹಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಪಿಯುಸಿ ವಿದ್ಯಾರ್ಥಿನಿಯರಿಗೆ ಸಮವಸ್ತ್ರ ಜಾರಿ ಮಾಡುವಂತೆಯೂ ಒತ್ತಾಯ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಮಾಶ್ರೀ ತಿಳಿಸಿದರು.

ಪದ್ಮ ಶ್ರೇಣಿಕ ಪ್ರಶಸ್ತಿಗಳಿಗೆ ರಾಜ್ಯದಿಂದ ಹೆಸರುಗಳನ್ನು ಶಿಫಾರಸು ಮಾಡುವ ಕುರಿತು ಈಗಾಗಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಒಂದು ಸುತ್ತಿನ ಸಭೆ ನಡೆಸಿದೆ. ಆದಷ್ಟು ಶೀಘ್ರದಲ್ಲಿ ಈ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಹೆಸರುಗಳನ್ನು ಅಂತಿಮಪಡಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕಳೆದ ಸಾಲಿನಂತೆ ಈ ಬಾರಿಯೂ ಸಕಾಲಕ್ಕೆ ಬಿಡುಗಡೆ ಮಾಡಲಾಗುವುದು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಮಾಶ್ರೀ ತಿಳಿಸಿದರು.

Write A Comment