ಕರ್ನಾಟಕ

ರೈಲ್ವೆ ಕಾಮಗಾರಿಗೆ ಬಿಬಿಎಂಪಿ ತನ್ನ ಪಾಲಿನ ಹಣ ನೀಡಬೇಕು; ರೈಲ್ವೆ ಸಚಿವ ಡಿವಿಎಸ್

Pinterest LinkedIn Tumblr

Sadananda-Gowda

ಬೆಂಗಳೂರು, ಸೆ. 28: ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ರೈಲ್ವೆ ಮಾರ್ಗಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಸೇತುವೆ ಮತ್ತು ಕೆಳ ಸೇತುವೆ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ಪಾಲಿನ ಶೇ.50ರಷ್ಟು ಅನುದಾನ ಒದಗಿಸಬೇಕು ಎಂದು ರೈಲ್ವೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ರವಿವಾರ ನಗರದ ರೈಲ್ವೆ ನಿಲ್ದಾಣದಿಂದ ಪ್ಯಾಸೆಂಜರ್ ರೈಲಿನಲ್ಲಿ ಕುಳಿತು ಕೆಂಗೇರಿ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿನ ಮೂಲ ಭೂತ ಸೌಕರ್ಯಗಳು ಹಾಗೂ ಸಾರ್ವಜನಿಕ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದರು. ಆನಂತರ ಮಾಧ್ಯಮ ಪ್ರತಿನಿಧಿಗಳೊಂ ದಿಗೆ ಮಾತನಾಡಿದ ಸದಾನಂದಗೌಡ, ಬಿಬಿಎಂಪಿ ತನ್ನ ಪಾಲಿನ ಅನುದಾನ ನೀಡಿದರೆ ರೈಲ್ವೆ ಮೇಲ್ಸೇತುವೆ ಮತ್ತು ಕೆಳ ಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು.

ದೇಶದಲ್ಲಿನ ಎಲ್ಲ ರೈಲ್ವೆ ನಿಲ್ದಾಣ ಮತ್ತು ರೈಲುಗಳಲ್ಲಿನ ನೈರ್ಮಲ್ಯ ಕಾಪಾಡಲು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಯಿಂದ ಮಾತ್ರ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಸಾರ್ವಜನಿಕ ಪ್ರಯಾ ಣಿಕರು ಅಗತ್ಯ ಸಹಕಾರ ನೀಡಬೇಕೆಂದು ಸದಾನಂದಗೌಡ ಅವರು ಮನವಿ ಮಾಡಿದರು.

ತೀರ್ಪಿಗೆ ತಲೆಬಾಗಬೇಕು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು, ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಎಲ್ಲಾ ಕ್ಷೇತ್ರಗಳಲ್ಲಿಯೂ ಭ್ರಷ್ಟರಿದ್ದಾರೆ. ಆದರೆ, ಎಲ್ಲರೂ ಭ್ರಷ್ಟರಲ್ಲ ಎಂದು ಮಾರ್ಮಿಕವಾಗಿ ನುಡಿದರು.

Write A Comment