ಕರ್ನಾಟಕ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ: ಕೃಷ್ಣಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಎಚ್‌ಡಿಕೆ ಮರು ಆಯ್ಕೆ

Pinterest LinkedIn Tumblr

kumar8

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಕುಮಾರಸ್ವಾಮಿ ಅವರನ್ನೇ ಮತ್ತೆ ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.  ಎ. ಕೃಷ್ಣಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು  ಆಯ್ಕೆಯಾಗಿದ್ದಾರೆ.

ಕುಮಾರಸ್ವಾಮಿ ಅವರಿಗೆ ಪಕ್ಷದ ಸಾರಥ್ಯ ವಹಿಸಿಕೊಳ್ಳುವ ಸಾಮರ್ಥ್ಯ ಹಾಗೂ ಅನುಭವವಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ ಮತ್ತು ಬಹುತೇಕ ಶಾಸಕರು ಹಾಗೂ  ಕೋರ್ ಕಮಿಟಿ ಸದಸ್ಯರು ಸಹ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಕುಮಾರಸ್ವಾಮಿ  ಅವರಿಗೆ ನೀಡಬೇಕೆಂದು ಒತ್ತಾಯಿಸಿದ್ದರು ಎಂದು ತಮ್ಮ ಮಗನ ಆಯ್ಕೆಯನ್ನು ದೇವೇಗೌಡರು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಪಕ್ಷಕ್ಕೆ ಇಬ್ಬರು ನೂತನ ಉಪಾಧ್ಯಕ್ಷರನ್ನು ಹಾಗೂ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ಇಬ್ಬರು ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ.

ಉಪಾಧ್ಯಕ್ಷರಾಗಿ ಅಮರನಾಥ್ ಶೆಟ್ಟಿ ಹಾಗೂ ಮಹಾಂತೇಶ್ ಕವಟಗಿಮಠ, ಪ್ರಧಾನ ಕಾರ್ಯದರ್ಶಿಗಳಾಗಿ ಶಾಸಕಿ ಶಾರದಾ ಪೂರ್ಯ ನೇಮಕಗೊಂಡಿದ್ದಾರೆ.

ಈ ರಾಜ್ಯಕ್ಕೆ ಪ್ರಾದೇಶಿಕ ಪಕ್ಷ ಬೇಕಾ ಅಥವಾ ಬೇಡಾ ಎಂಬುದನ್ನು ರಾಜ್ಯದ ಜನ ತೀರ್ಮಾನ ಮಾಡಲಿ ಎಂದು ದೇವೇಗೌಡರು ಹೇಳಿದ್ದಾರೆ. ಅಲ್ಲದೆ ತಮ್ಮ ಪಕ್ಷದ ಬಗ್ಗೆ ತಪ್ಪು ಮಾಹಿತಿ ನೀಡುವವರ ಬಗ್ಗೆ ಸೊಪ್ಪು ಹಾಕದಿರುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Write A Comment