ಕರ್ನಾಟಕ

ಜಾತಿಗಣತಿಯಿಂದ ಧರ್ಮಕ್ಕೆ ಧಕ್ಕೆ: ಕೆ.ಎಸ್.ಈಶ್ವರಪ್ಪ

Pinterest LinkedIn Tumblr

bjp

ಬೆಂಗಳೂರು, ನ.25: ಜಾತಿ ಜನಗಣತಿಯಲ್ಲಿ ಧರ್ಮವನ್ನು ಒಡೆಯುವ ಹುನ್ನಾರ ನಡೆದಿದೆ. ಅದನ್ನು ಕೈಬಿಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಮಂಗಳವಾರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಹಿಂದುಳಿದ ವರ್ಗ ಮೋರ್ಚಾದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಒಳ್ಳೆಯವರೆ, ಆದರೆ, ಜಾತಿ ಜನಗಣತಿ ಅರ್ಜಿಯಲ್ಲಿ ಹಿಂದೂ ಕ್ರಿಶ್ಚಿಯನ್, ದಲಿತ ಕ್ರಿಶ್ಚಿಯನ್, ಮತಾಂತರಗೊಂಡ ಕ್ರಿಶ್ಚಿಯನ್ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿರುವುದು ಸರಿಯಲ್ಲ ಇದನ್ನು ಕೂಡಲೇ ತೆಗೆಯಬೇಕೆಂದು ಅವರು ಒತ್ತಾಯಿಸಿದರು. ಅಸಮರ್ಥ ಹಾಗೂ ಆರೋಪ ಎದುರಿಸುತ್ತಿರುವ ಸಚಿವರ ರಾಜೀನಾಮೆ ಪಡೆಯುವುದು, ರಾಜ್ಯಾದ್ಯಂತ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಸಲಿದೆ ಎಂದು ಈಶ್ವರಪ್ಪ ಎಚ್ಚರಿಸಿದರು. ಆರೋಪ ಎದುರಿಸುತ್ತಿರುವ ಸಚಿವರಾದ ಕೆ.ಜೆ.ಜಾರ್ಜ್, ಎಚ್.ಎಸ್.ಮಹದೇವಪ್ರಸಾದ್, ದಿನೇಶ್ ಗುಂಡೂರಾವ್, ಖಮ ರುಲ್ ಇಸ್ಲಾಮ್ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಇದೆ ವೇಳೆ ಅತ್ಯಾಚಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕಾದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರಕಾರವನ್ನು ಅವರು ಆಗ್ರಹಿಸಿದರು.
ರಾಜ್ಯ ಸರಕಾರದ ನಿರ್ಲಕ್ಷ ಧೋರಣೆ ಖಂಡಿಸಿ ಡಿ.9ರಂದು ಸರಿಸುಮಾರು 50 ಸಾವಿರ ಮಂದಿ ಬಿಜೆಪಿ ಕಾರ್ಯಕರ್ತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಅವರು ಹೇಳಿದರು.
ಹೈದರಾಬಾದ್ ಕರ್ನಾಟಕ ಭಾಗಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡಬೇಕು. ಇಲ್ಲದಿದ್ದರೆ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಚಿವ ಸಂಪುಟ ನಡೆಸುವುದು ಅರ್ಥವಿಲ್ಲ ಎಂದು ಹೇಳಿದರು.

Write A Comment