ಕರ್ನಾಟಕ

ರಾಘವೇಶ್ವರ ಭಾರತಿ ಶ್ರೀ ಅತ್ಯಾಚಾರ ಪ್ರಕರಣ;ಎಫ್‌ಐಆರ್ ಅರ್ಜಿ ವಜಾ ಪ್ರಶ್ನೆ

Pinterest LinkedIn Tumblr

Raghaveshwara_Swami_0

ಬೆಂಗಳೂರು,ನ.28: ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ಡಿ.ಎಚ್.ವೇಲಾ ಹಾಗೂ ನ್ಯಾ. ಆರ್.ಬಿ. ಬೂದಿಹಾಳ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಈ ಹಿಂದೆ ಎಫ್‌ಐಆರ್‌ನ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೆ.ಎನ್.ಫಣೀಂದ್ರ ಅವರಿದ್ದ ಪೀಠ, ದಿಲ್ಲಿಯಲ್ಲಿ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಅತ್ಯಾಚಾರಕ್ಕೊಳಗಾದ ಪ್ರಕರಣ ಸಂಬಂಧ ದೂರು ದಾಖಲಾದಾಗ ತನಿಖೆ ನಡೆಸುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಸೂಚಿಸಿದೆ. ಆದುದರಿಂ ದಾಗಿ ಅರ್ಜಿದಾರರಾದ ಶ್ರೀಗಳು ತನಿಖೆಗೆ ಒಳಪಡಬೇ ಕಾಗುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತ್ತು.
ಅಲ್ಲದೆ, ಪ್ರಕರಣ ಸಂಬಂಧ ಅತ್ಯಾಚಾರಕ್ಕೊಳಗಾ ಗಿರುವುದಾಗಿ ಆರೋಪಿಸುತ್ತಿರುವ ಸಂತ್ರಸ್ತೆ ಹೊನ್ನಾವರದ ಮ್ಯಾಜಿಸೇಟ್ಟ್ರೆಟ್ ನ್ಯಾಯಾಧೀಶರ ಮುಂದೆ ನೀಡಿದ್ದ ಹೇಳಿಕೆಯನ್ನು ಗಿರಿನಗರ ಪೊಲೀಸರು ಸಾಕ್ಷಿಯನ್ನಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ಹೇಳಿದ್ದರು.

Write A Comment