ಕರ್ನಾಟಕ

‘ಲೋಕಾ’ಕಾಯ್ದೆಗೆ ತಿದ್ದುಪಡಿ: ನ್ಯಾ.ಸಂತೋಷ್ ಹೆಗ್ಡೆ ವಿರೋಧ

Pinterest LinkedIn Tumblr

dalitha-sanghataneಬೆಂಗಳೂರು, ನ.30: ರಾಜ್ಯದ ಲೋಕಾಯುಕ್ತ ಕಾಯ್ದೆ ಜಗತ್ತಿನಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಸಿಎಂ ಸಿದ್ದರಾಮಯ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಬೇಸರ ವ್ಯಕ್ತ ಪಡಿಸಿದ್ದಾರೆ.

ರವಿವಾರ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ‘ದಲಿತ್ ಜನ ಸೇನಾ’ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ಸರಕಾರವು ಭ್ರಷ್ಟಚಾರದಿಂದ ಮುಕ್ತವಾಗಿಲ್ಲ. ಅವರ ಸಚಿವ ಸಂಪುಟದಲ್ಲಿರುವ ಹಲವಾರು ಸಚಿವರ ವಿರುದ್ಧ ಭೂ ಒತ್ತುವರಿ, ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ. ಆದುದರಿಂದ, ಸಿದ್ದರಾಮಯ್ಯ ಸರಕಾರವನ್ನು ಭ್ರಷ್ಟಾಚಾರ ಮುಕ್ತವಾದ ಸರಕಾರ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರಿ ಕಚೇರಿಗಳಲ್ಲಿ ನಡೆಯುವ ಲಂಚದ ಚಟುವಟಿಕೆಗಳನ್ನು ಹತ್ತಿಕ್ಕಲು ಹಾಗೂ ಸಾರ್ವಜನಿಕರಿಗೆ ಸರಕಾರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಲೋಕಾಯುಕ್ತದಲ್ಲಿರುವ ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ ಅತ್ಯಂತ ಶಕ್ತಿಶಾಲಿ ಆಯುಧವಾಗಿದೆ ಎಂದು ಅವರು ಹೇಳಿದರು.

ಸರಕಾರ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಈ ಬೆಳವಣಿಗೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸಂತೋಷ್ ಹೆಗ್ಡೆ ಕಿಡಿ ಕಾರಿದರು.

Write A Comment