ಕರ್ನಾಟಕ

ಕೆಆರ್‌ ಪುರಂನಲ್ಲಿ ಖಾಸಗಿ ಬಸ್‌ಗೆ ಬೆಂಕಿ: ಮೂವರಿಗೆ ಗಾಯ

Pinterest LinkedIn Tumblr

busfire

ಬೆಂಗಳೂರು: ಖಾಸಗಿ ಬಸ್‌ಗೆ ಬೆಂಕಿ ತಗುಲಿ ಮೂವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೆಆರ್‌ ಪುರಂನಲ್ಲಿ ಮಂಗಳವಾರ ನಡೆದಿದೆ.

ಕೋಲಾರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಕೆಆರ್ ಪುರಂ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಗಕ್ಕೆ ಗುದ್ದಿದ ಪರಿಣಾಮ ಬಸ್‌ನ ಡೀಸೆಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿಯ ಕೆನ್ನಾಲಿಗೆ ಇಡೀ ಬಸ್‌ಗೆ ತಗುಲಿದ್ದು, ಬಸ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಬಸ್‌ನಲ್ಲಿ ಬೆಂಕಿ ಹೊತ್ತು ಉರಿಯುತ್ತಿದ್ದು, ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Write A Comment