ಕರ್ನಾಟಕ

ಉತ್ತಮ ರಸ್ತೆ ಬೇಕು ಅಂದರೆ ಜನರು ಟೋಲ್ ಫೀ ಕಟ್ಟಬೇಕು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟನೆ

Pinterest LinkedIn Tumblr

T_B_Jayachandra

ಬೆಂಗಳೂರು: ಉತ್ತಮ ರಸ್ತೆ ಬೇಕು ಎಂದರೆ ಜನರು ಟೋಲ್ ಫೀ ಕಟ್ಟಬೇಕು ಎಂದು ವಿಧಾನಸಭೆಯಲ್ಲಿಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಫೀ ಸಂಗ್ರಹದ ಕುರಿತು ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿಂದು ಈ ಕುರಿತು ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಟೋಲ್ ಫೀ ಸಂಗ್ರಹದ ಕುರಿತು ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.

ಯಾವ ರಾಜ್ಯ ಹೆದ್ದಾರಿಗಳ ಮೇಲೆ ಎಷ್ಟು ಟೋಲ್ ಫೀ ಹೇರಬೇಕು ಎಂಬುದರ ಕುರಿತು ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗವುದು ಎಂದು ವಿವರಿಸಿದರು.

ಇದೇ ವೇಳೆ ರಾಜ್ಯ ರಸ್ತೆಗಳ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ಯಲಹಂಕದಿಂದ ಗೌರಿಬಿದನೂರಿನವರೆಗಿನ  76 ಕಿ.ಮೀ ರಸ್ತೆ ಅಭಿವೃದ್ಧಿಗಾಗಿ ರೂ.152 ಕೋಟಿ ಅನುದಾನ ನೀಡಲಾಗುವುದು ಎಂದು ಟಿ.ಬಿ.ಜಯಚಂದ್ರ ವಿವರಣೆ ನೀಡಿದ್ದಾರೆ.

ಖಾಸಗಿ ಸಹಭಾಗಿತ್ವದ ಸಹಯೋಗದೊಂದಿಗೆ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಟಿ.ಬಿ.ಜಯಚಂದ್ರ ಅವರು ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಅವರು ವಿವರಿಸಿದರು.

Write A Comment