ಕರ್ನಾಟಕ

ಬೆಂಗಳೂರಿನಲ್ಲೊಂದು ಹೇಯ ಘಟನೆ; ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು

Pinterest LinkedIn Tumblr

RAPE COPY_0_5_0_0_2

ಚಾಕು ತೋರಿಸಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿರುವ ಹೇಯ ಘಟನೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ನಡೆದಿದೆ.

ನಂದಿನಿ ಲೇಔಟ್‌ನ ರಾಜೀವ್ ಗಾಂಧಿ ನಗರದಲ್ಲಿರುವ ತಮ್ಮ ಮನೆಯ ಮುಂದೆ ಮಂಗಳವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ 14 ವರ್ಷದ ಬಾಲಕಿ ಆಟವಾಡುತ್ತಿದ್ದಳು ಎನ್ನಲಾಗಿದೆ. ಈ ಸಮಯದಲ್ಲಿ ಅಲ್ಲಿಗೆ ಬಂದ ಲೋಕೇಶ್ ಮತ್ತು ಮನೋಜ್ ಇಬ್ಬರೂ ಆಕೆಯನ್ನು ಪುಸಲಾಯಿಸಿ ಉದ್ಯಾನಕ್ಕೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ಬಾಲಕಿಗೆ ಚಾಕು ತೋರಿಸಿ ಬೆದರಿಸಿದ್ದಲ್ಲದೇ ಕೂಗಾಡಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.

ಮಗಳು ಮನೆಗೆ ಎಷ್ಟು ಹೊತ್ತು ಕಳೆದರೂ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದು ಪಾರ್ಕ್‌ನ ಬಳಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂದಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ತದ ನಂತರ ನಡೆದ ಘಟನೆಯನ್ನು ತಿಳಿದು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳಾದ ಕಂಠೀರವ ನಗರದ ನಿವಾಸಿಗಳಾದ ಲೋಕೇಶ್ ನರಸಿಂಹಯ್ಯ ಮತ್ತು ಕೃಷ್ಣಾನಂದನಗರದ ಮನೋಜ್ ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Write A Comment