ಕರ್ನಾಟಕ

ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟ ಪ್ರಕರಣ; ಬಿಹಾರದಲ್ಲಿ ಶಂಕಿತ ಆರೋಪಿ ಬಂಧನ?

Pinterest LinkedIn Tumblr

bamb

ಬೆಂಗಳೂರು: ನಗರದ ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಬಿಹಾರ ಪೊಲೀಸರು ಗಯಾದಲ್ಲಿ ಶುಕ್ರವಾರ ರಫೀಕ್‌ ಎಂಬ ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಆದರೆ, ಈ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ ಎಂದು ನಗರ ಪೊಲೀಸ್‌ ಕಮಿಷನರ್‌ ಎಂ.ಎನ್‌.ರೆಡ್ಡಿ ಹೇಳಿದ್ದಾರೆ.

‘ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಗಯಾ ಪೊಲೀಸರು ರಫೀಕ್‌ನನ್ನು ಬಂಧಿಸಿದ್ದಾರೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ.

‘ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಯನ್ನು ಬಂಧಿಸಿರುವ ಬಗ್ಗೆ ಬಿಹಾರ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ವಿಶೇಷ ತನಿಖಾ ತಂಡದ ಸಿಬ್ಬಂದಿ ಸದ್ಯದಲ್ಲೇ ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ವಿವರ ಪಡೆದುಕೊಳ್ಳುತ್ತಾರೆ’ ಎಂದು ರೆಡ್ಡಿ ತಿಳಿಸಿದರು.

ಚರ್ಚ್‌ ಸ್ಟ್ರೀಟ್‌ನಲ್ಲಿ 2014ರ ಡಿ.28ರಂದು ಸಂಭವಿಸಿದ್ದ ಬಾಂಬ್‌ ಸ್ಫೋಟದಲ್ಲಿ ತಮಿಳುನಾಡು ಮೂಲದ ಭವಾನಿದೇವಿ ಎಂಬುವರು ಮೃತ­ಪಟ್ಟಿದ್ದರು. ಅಲ್ಲದೇ, ನಾಲ್ಕು ಮಂದಿ ಗಾಯಗೊಂಡಿದ್ದರು.

Write A Comment