ಕರ್ನಾಟಕ

ವಿಧಾನಸೌಧದೆದುರು ಮೂತ್ರವಿಸರ್ಜನೆಗೆ ಮುಂದಾದ ವಾಟಾಳ್ ಬಂಧನ

Pinterest LinkedIn Tumblr

vatal

ಬೆಂಗಳೂರು,ಜ.9: ಶೌಚಾಲಯಗಳಿಗಾಗಿ ಆಗ್ರಹಿಸಿ ಬೆಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಕೊರತೆ ಇರುವುದನ್ನು ವಿರೋಧಿಸಿ ಸೂಕ್ತ ಶೌಚಾಲಯಗಳ ನಿರ್ಮಾಣಕ್ಕೆ ಆಗ್ರಹಿಸಿ ವಿಧಾನಸೌಧದ ಎದುರು ಮೂತ್ರ ವಿಸರ್ಜನೆ ಮಾಡಲು ಮುಂದಾದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದರು.

ಶೌಚಾಲಯಗಳ ಕೊರತೆಯಿಂದ ನಾಗರಿಕರಿಗೆ ತೀವ್ರ ತೊಂದರೆಯಾಗಿದೆ. ಇದಕ್ಕಾಗಿ ಕಳೆದ 15 ವರ್ಷಗಳಿಂದ ವಿನೂತನ ಪ್ರತಿಭಟನೆಗಳನ್ನು ಮಾಡಿ ಸರ್ಕಾರದ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಇಂದು ಕೂಡ ವಿಧಾನಸೌಧದ ಎದುರು ಪ್ರತಿಭಟನೆ ಮಾಡಲು ಮುಂದಾದ ವಾಟಾಳ್ ಅವರನ್ನು ಬಂಧಿಸಲಾಯಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಫ್ರೀಡಂ ಪಾರ್ಕ್ , ಲಾಲ್‌ಬಾಗ್, ಕಬ್ಬನ್‌ಪಾಕ್, ವಿಧಾನಸೌಧ, ರಾಜಭವನದ ಸುತ್ತಮುತ್ತ ಎಲ್ಲೂ ಶೌಚಾಲಯಗಳಿಲ್ಲ. ಇದರಿಂದ ನಾಗರಿಕರು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ನಗರಕ್ಕೆ ಸುಮಾರು 15 ಸಾವಿರ ಶೌಚಾಲಯಗಳ ಅಗತ್ಯವಿದೆ. ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳಿಲ್ಲದೆ ಮಹಿಳೆಯರು ನರಕಯಾತನೆ ಪಡುತ್ತಿದ್ದಾರೆ. ಪ್ರತಿ ಗ್ರಾಮಗಳಿಗೂ 5 ಸುಸಜ್ಜಿತ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

Write A Comment