ಕರ್ನಾಟಕ

ಎಪಿಎಲ್ ಕಾರ್ಡ್‌ದಾರರಿಗೆ ಆರೋಗ್ಯ ಯೋಜನೆ : ಜ.20 ರಂದು ಚಾಲನೆ

Pinterest LinkedIn Tumblr

U.T.Khadar_visit_Shiruru (6)

ಬೆಂಗಳೂರು, ಜ.17: ಎಪಿಎಲ್ ಕಾರ್ಡ್‌ದಾರರಿಗೆ ರಾಜೀವ್ ಆರೋಗ್ಯ ಯೋಜನೆ, ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿಯಡಿ ಆರೋಗ್ಯ ಸೇವೆ ಒದಗಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಜ.20 ರಂದು ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಇಂದಿಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಲ್ಲಿ ಎಪಿಎಲ್ ಕುಟುಂಬದವರು 70:30 ಅನುಪಾತದಲ್ಲಿ ಆರೋಗ್ಯ ಸೇವೆ ಪಡೆಯಲಿದ್ದಾರೆ.
ಜ್ಯೋತಿ ಸಂಜೀವಿನಿ ಯೋಜನೆಯಡಿ ನೌಕರರಿಗೆ ಉಚಿತವಾಗಿ ಆರೋಗ್ಯ ಸೇವೆ ಸಿಗಲಿದೆ ಎಂದು ತಿಳಿಸಿದರು.

ರಾಜೀವ್ ಆರೋಗ್ಯ ಭಾಗ್ಯ ಯೋಜನೆಯಡಿ ಪ್ರತಿವರ್ಷ 15 ಸಾವಿರ ಫಲಾನುಭವಿಗಳು ಪ್ರಮುಖ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ. ಜ್ಯೋತಿ ಸಂಜೀವಿನಿ ಯೋಜನೆಯಡಿ 6ಸಾವಿರ ನೌಕರರು ಈ ಸೌಲಭ್ಯ ಪಡೆಯಲಿದ್ದಾರೆ ಎಂದು ಹೇಳಿದ ಅವರು, ಇದಕ್ಕೆ 350 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದರು. ಬಡತನ ರೇಖೆಗಿಂದ ಕೆಳಗಿರುವವರಿಗೆ ಈಗಾಗಲೇ ವಾಜಪೇಯಿ ಶ್ರೀ ಆರೋಗ್ಯ ಯೋಜನೆಯಡಿ ಸೇವೆ ಒದಗಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಭರವಸೆ ನೀಡಿದಂತೆ ಎಪಿಎಲ್ ಕಾರ್ಡ್‌ದಾರರಿಗೂ ಸಹ ಆರೋಗ್ಯ ಸೇವೆ ಒದಗಿಸಲು ಈ ಯೋಜನೆ ರೂಪಿಸಿದೆ.

ಹೃದ್ರೋಗ, ಕ್ಯಾನ್ಸರ್, ಸುಟ್ಟ ಗಾಯ, ಶಸ್ತ್ರ ಚಿಕಿತ್ಸೆ, ಅಪಘಾತ ಸೇರಿದಂತೆ ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.

Write A Comment