ಕರ್ನಾಟಕ

ಬಿಜೆಪಿಯ ಅರ್ಕಾವತಿ ರಾಜಕೀಯಕ್ಕೆ ಗೌರ್ನರ್ ಜಗ್ಗಲ್ಲ :ಸಿಎಂ

Pinterest LinkedIn Tumblr

siddaramaiah

ಮೈಸೂರು, ಜ.17: ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಬಿಜೆಪಿ ಮಾಡುತ್ತಿರುವ ರಾಜಕೀಯಕ್ಕೆ ರಾಜ್ಯಪಾಲರು ಮಣಿಯುವುದಿಲ್ಲ. ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಮೈಸೂರಿನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯವರು ಮಾಡಿರುವ ಆರೋಪ ನಿರಾಧಾರ.

ಈ ಪ್ರಕರಣದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಪಾಲರು ಸಂವಿಧಾನ ಬದ್ಧವಾಗಿ ಕಾರ್ಯ ನಿರ್ವ ಹಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುವ ಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅರ್ಕಾವತಿ ಡಿ ನೋಟಿಫಿಕೇಶನ್ ಆಗಿದೆ. ಅವರ ಅವಧಿಯಲ್ಲಿ ಸುಮಾರು 610 ಎಕರೆ ಡಿ ನೋಟಿಫಿಕೇಶನ್ ಆಗಿದ್ದು , ಇದರ ಫಲಾನುಭವಿಗಳೇ ಡಿ.ವಿ.ಸದಾನಂದಗೌಡ ಮತ್ತು ಜಗದೀಶ್ ಶೆಟ್ಟರ್ ಎಂದು ತಿಳಿಸಿದರು. ಯಡಿಯೂರಪ್ಪ ಮಾಡಿರುವ ಡಿ ನೋಟಿಫಿಕೇಶನ್ ಸಂಬಂಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ಸಿಒಡಿ ಕೂಡ ವರದಿ ನೀಡಿದೆ. ತನಿಖೆ ನಡೆದರೆ ಬಿಎಸ್‌ವೈ ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಸಿದ್ದು ಹೇಳಿದರು.

ನನ್ನ ಆಡಳಿತ ಅವಧಿಯಲ್ಲಿ ಅಕ್ರಮವಾಗಿ ಡಿ ನೋಟಿಫಿಕೇಶನ್ ಮಾಡಿಲ್ಲ. ಹೈಕೋರ್ಟ್ ಸೂಚನೆಯಂತೆ ಡಿ ನೋಟಿಫಿಕೇಶನ್ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ನನ್ನ ಪ್ರಾಮಾಣಿಕತೆ ಮತ್ತು ನೈತಿಕತೆಯ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Write A Comment