ಕರ್ನಾಟಕ

2 ವರ್ಷದ ಕಾಂಗ್ರೆಸ್ ಆಡಳಿತದಲ್ಲಿ 132 ರೈತರ ಆತ್ಮಹತ್ಯೆ: ಎಚ್‌ಡಿಕೆ ಆರೋಪ

Pinterest LinkedIn Tumblr

KUMARASWAMY

ಚಿಕ್ಕನಾಯಕನಹಳ್ಳಿ ,ಫೆ.17:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 2ವರ್ಷಗಳಲ್ಲಿ 132 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದ್ದಕ್ಕೆ ಸರ್ಕಾರದ ತಪ್ಪು ನಿರ್ಧಾರಗಳೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಸಕ ಸಿ.ಬಿ.ಸುರೇಶ್‌ಬಾಬು ಹುಟ್ಟು ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಮಡಿಲು ತುಂಬುವ ಹಾಗೂ ವಿಕಲಚೇತನರಿಗೆ ವಿವಿಧ ಸೌಲಭ್ಯಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ರೈತರ ಬೆಳೆಗೆ ಸರಿಯಾದ ಬೆಲೆಯಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ.

ರೈತರ ನೆರವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಶಾಸಕ ಸಿ.ಬಿ.ಸುರೇಶ್‌ಬಾಬು ಮಂತ್ರಿಗಳಾಗಿ ಕೆಲಸ ಮಾಡಬೇಕಾಗಿತ್ತು. ಆದರೆ ಈಗ ನಾವು ವಿರೋಧ ಪಕ್ಷದಲ್ಲಿರುವುದರಿಂದ ಜನರ ನಿರಿಕ್ಷೆಗೆ ತಕ್ಕಂತೆ ಕೆಲಸ ಮಾಡಲು ಆಗುತ್ತಿಲ್ಲ ಎಂದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದಸ್ವಾಮಿಜಿ ಮಾತನಾಡಿ, ತಮ್ಮ ಹುಟ್ಟುಹಬ್ಬವನ್ನು ವೈಭವೀಕರಿಣದಿಂದ ಆಚರಿಸಿಕೊಳ್ಳದೆ, ಶ್ರೀಮಂತರು ಮಡಿಲು ತುಂಬುವ ಕಾರ್ಯಕ್ರಮ(ಸೀಮಂತ) ಮಾಡಿಕೊಳ್ಳುತ್ತಾರೆ .ಆದರೆ ಬಡವರಿಗೆ ಅಣ್ಣನೋಪಾದಿಯಲ್ಲಿ ಸುರೇಶ್ ಬಾಬು ಅವರು ಸೀಮಂತ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು. ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿ, ತಾಲೂಕಿನ 1700 ಗರ್ಭಿಣಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಳಾಗಿದೆ. ಆದಿಚುಂಚನಗಿರಿ ಆಸ್ಪತ್ರೆ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕ್ಷೇತ್ರದ ಹೆಣ್ಣುಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಹೆರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಶಾಸಕರಾದ ಸುಧಾಕರ್‌ಲಾಲ್, ಶ್ರೀನಿವಾಸ್, ರಮೇಶ್‌ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯರಾದ ಡಾ.ಎಂ.ಆರ್.ಹುಲಿನಾಯ್ಕರ್, ಚೌಡರೆಡ್ಡಿ ತೂಪಲ್ಲಿ, ಜಿ.ಪಂ.ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಸ್ತ್ರೀರೋಗ ತe ಡಾ.ಪದ್ಮಿನಿ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

Write A Comment