ಕರ್ನಾಟಕ

ಸಿ.ಎಂ ಆಗುವ ಅರ್ಹತೆ ನನಗಿದೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್

Pinterest LinkedIn Tumblr

par

ಬೆಂಗಳೂರು: ‘ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ನನಗಿದೆ. ತಮ್ಮ ಸಮುದಾಯಕ್ಕೆ ಸೇರಿದ ಒಬ್ಬರನ್ನು ಮುಖ್ಯಮಂತ್ರಿ ಮಾಡಿ ಎಂದು ಒತ್ತಾಯಿ­ಸುವ ಹಕ್ಕು ದಲಿತ ಸಮುದಾಯಕ್ಕೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು.

ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಬೇಕು ಎಂದು ಕೆಲವು ದಲಿತ ಸಂಘಟನೆಗಳು ಇತ್ತೀಚಿನ ದಿನಗಳಲ್ಲಿ ಮುಂದಿಟ್ಟಿರುವ ಒತ್ತಾಯದ ಕುರಿತು ಇಲ್ಲಿನ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ‘ದಲಿತ ಮುಖ್ಯಮಂತ್ರಿ ಬೇಕು ಎಂಬ ಬೇಡಿಕೆ ಮುಂದಿಟ್ಟ ಸಮು­ದಾಯದ ಮುಖಂಡರನ್ನು ಟೀಕಿಸುವುದು ಸರಿಯಲ್ಲ’ ಎಂದರು.

ಇಂಥದ್ದೊಂದು ಬೇಡಿಕೆಯನ್ನು ದಲಿತ ಸಂಘಟನೆಗಳು ಮುಂದಿಡಲು ತಾವೇ ಕಾರಣ ಎಂಬ ಆರೋಪಗಳನ್ನು ಪರಮೇಶ್ವರ್ ತಳ್ಳಿಹಾಕಿದರು. ರಾಜ್ಯವು ದಲಿತ ಮುಖ್ಯಮಂತ್ರಿ­ಯನ್ನು ಕಾಣಲು ಮುಂದಿನ ಚುನಾವಣೆವರೆಗೆ ಕಾಯಬೇಕು ಎಂದು ಕೆಲವು ಸಚಿವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ದಲಿತ ಸಮುದಾಯಕ್ಕೆ ಸೇರಿದವರನ್ನು ಮುಖ್ಯಮಂತ್ರಿ ಮಾಡುವುದು ಕಾಂಗ್ರೆಸ್ ವರಿಷ್ಠರಿಗೆ ಬಿಟ್ಟ ವಿಚಾರ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಪರಮೇಶ್ವರ್ ಹೇಳಿದರು. ‘ವಿಧಾನಸಭಾ ಚುನಾವಣೆಗೂ ಮುನ್ನ ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಆಗಿದ್ದೆ. ಆದರೆ, ಚುನಾವಣೆಯಲ್ಲಿ ನಡೆದ ಬೆಳವಣಿಗೆಗಳಿಂದ ನಂತರ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿ ಉಳಿಯಲಿಲ್ಲ’ ಎಂದು ಹೇಳಿದರು.

Write A Comment