ಕರ್ನಾಟಕ

ಶಿವಮೊಗ್ಗದಲ್ಲಿ ಮುಂದುವರೆದ ಉದ್ವಿಗ್ನ ಪರಿಸ್ಥಿತಿ

Pinterest LinkedIn Tumblr

Shivamogga-Fire

ಶಿವಮೊಗ್ಗ,ಮಾ.7: ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಆತಂಕದ ನಗರದ ವಿವಿಧೆಡೆ ಬೈಕ್ ಹಾಗೂ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಶಿವಮೊಗ್ಗ ನಗರದಲ್ಲಿ ಹೋಳಿ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಇಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಹೋಳಿ ಆಚರಣೆಗೆ ಅವಕಾಶ ಕಲ್ಪಿಸಲಾಗಿದ್ದು, 1 ಗಂಟೆಯಿಂದ ನಾಳೆ ಸಂಜೆ 6 ಗಂಟೆವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಆರ್‌ಎಫ್, ಸಿಆರ್‌ಪಿಎಫ್ ಸೇರಿದಂತೆ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಹೋಳಿ ಹಬ್ಬದ ಅಂಗವಾಗಿ ನಗರ ವ್ಯಾಪ್ತಿಯ ಎಲ್ಲಾ ಶಾಲಾಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ಇಂದು ರಜೆ ಘೋಷಿಸಲಾಗಿದೆ. ಕಳೆದ ವಾರವಷ್ಟೇ ಪಾಪುಲರ್ ಫ್ರಂಟ್ ಆಫ್ ಇಂಡಿಯ ನಡೆಸಿದ ಏಕತಾ ಯಾತ್ರಾ ಸಂದರ್ಭದಲ್ಲಿ ಕೋಮು ಸಂಘರ್ಷದಿಂದ ಶಿವಮೊಗ್ಗ ಪ್ರಕ್ಷುಬ್ದಗೊಂಡಿತ್ತು.

ಕಿಡಿಗೇಡಿಗಳ ಕೃತ್ಯಕ್ಕೆ ಹಲವು ವಾಹನಗಳು, ಅಂಗಡಿಗಳು ಬೆಂಕಿಗಾಹುತಿಯಾಗಿದ್ದವು. ಪ್ರತಿಭಟನೆಗಳೂ ನಡೆದು, ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಗಿತ್ತು. ಈ ಘಟನೆ ಮಾಸುವ ಮುನ್ನವೇ ನಿನ್ನೆ ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹೋಳಿ ಹಬ್ಬ ಇರುವುದರಿಂದ ಅಹಿತಕರ ಘಟನೆಗಳು ನಡೆಯಬಹುದು ಎಂಬ ಹಿನ್ನೆಲೆಯಲ್ಲಿ ಇಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Write A Comment