ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ದರ ಇಳಿಕೆ ಮಾಡದೇ ಇರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರು. 35ಕ್ಕೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧವಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಫ್ರೀಡಂ ಪಾರ್ಕ ನಲ್ಲಿ ಮಂಗಳವಾರ ಬೆಳಗ್ಗೆ ಪ್ರತಿಭಟನೆ ನಡೆಸಲಾಗುವುದು. ರು. 35ಕ್ಕೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡುವ ಮೂಲಕ ಕೇಂದ್ರದ ಜನವಿರೋಧಿ ನೀತಿಯನ್ನು ಖಂಡಿಸಲಾಗುವುದು ಎಂದು ಹೇಳಿದರು. ಹಾಗಾಗಿ ನೀವು ಅತ್ಯಂತ ಕಡಿಮೆ ದರದಲ್ಲಿ ಪೆಟ್ರೋಲ್ ಖರೀದಿಸಬೇಕೆಂದಿದ್ದರೆ ಮಾ.10ರಂದು ಫ್ರೀಡಂ ಪಾರ್ಕ್‍ಗೆ ಹೋಗಿ. ಆದರೆ ಎಷ್ಟು ಲೀಟರ್ ಪೆಟ್ರೋಲ್ ಮಾರಾಟ ಮಾಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಇದರ ಭಾಗವಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಿದ್ದೇವೆ. ಈ ಹೋರಾಟಕ್ಕೆ ಪ್ರದೇಶ ಕಾಂಗ್ರೆಸ್ ಸಮಿತಿಯ ಬೆಂಬಲವಿದೆ ಎಂದರು. ಇದ್ದಕ್ಕಿದ್ದಂತೆ ನೀವು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದೀರಿ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಸೋಮಶೇಖರ್ ಸಮರ್ಪಕ ಉತ್ತರ ನೀಡಲಿಲ್ಲ.
ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ದರ 105 ಡಾಲರ್ನಿಂದ 73 ಡಾಲರ್‍ಗೆ ಇಳಿಕೆಯಾಗಿದೆ. ಆದಾಗ್ಯೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಇದು ಜನ ವಿರೋಧಿ ಕ್ರಮ ಎಂದು ಹೇಳಿದರು.