ಹಿರಿಯೂರು: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹೆಂಡತಿಯನ್ನು ಕತ್ತು ಕೊಯ್ದು ಬರ್ಭರವಾಗಿ ಹತ್ಯೆ ಮಾಡಿದ ಗಂಡ ಹೊಲದಲ್ಲಿ ತಾನೂ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಬೆಳ್ಳಘಟ್ಟ ಗ್ರಾಮದಲ್ಲಿ ನಡೆದಿದೆ. ಮಮತ(28) ಬರ್ಭರವಾಗಿ ಕತ್ತು ಕೊಯ್ದು ಕೊಲೆ ಮಾಡಿದ ಕರಿಯಪ್ಪ(34) ಬಳಿಕ ಗುಡಿಹಳ್ಳಿಯ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬೆಳ್ಳಗಟ್ಟದ ಈ ದಂಪತಿಗಳ ನಡುವೆ ವೈಮನಸ್ಸಿತ್ತು. ತನ್ನ ಪತ್ನಿಯ ನಡತೆಯ ಬಗ್ಗೆ ಕರಿಯಪ್ಪ ಆಕ್ರೋಶಗೊಂಡಿದ್ದ.
ಈ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ತಾನೂ ಕೂಡ ನೇಣಿಗೆ ಶರಣಾಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಿರಿಯೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.