ಕರ್ನಾಟಕ

ಮೆಡಿಕಲ್, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾದಿದೆ ಶಾಕ್ ..!

Pinterest LinkedIn Tumblr

Collage-Students

ಬೆಂಗಳೂರು, ಮೇ 2- ಮೆಡಿಕಲ್, ಇಂಜಿನಿಯರಿಂಗ್ ನಂತಹ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆಘಾತಕಾರಿ ಸುದ್ದಿ ಯೊಂದು ಎದುರಾಗಿದೆ. ಎಲ್ಲಾ ಖಾಸಗಿ ಕಾಲೇಜುಗಳು ಈಗಿರುವ ಶಿಕ್ಷಣ ಶುಲ್ಕವನ್ನು ದುಪ್ಪಟ್ಟು ಹೆಚ್ಚಿಸುವಂತೆ  ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿವೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರೇ ಖುದ್ದಾಗಿ ಈ ವಿಷಯ ತಿಳಿಸಿದ್ದು, ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಕಳೆದ 7-8 ವರ್ಷಗಳಿಂದ ಶುಲ್ಕ ಪರಿಷ್ಕರಣೆಯಾಗಿಲ್ಲ.

ಹೀಗಾಗಿ ಕಾಲೇಜು ನಡೆಸುವುದು ಕಷ್ಟವಾಗುತ್ತಿದೆ. ಶೇ.100ರಷ್ಟು ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಕೊಡಬೇಕೆಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ. ಆದರೆ, ಇದಕ್ಕೆ ರಾಜ್ಯಸರ್ಕಾರ ಅನುಮತಿ ನೀಡಿಲ್ಲ. ಶುಲ್ಕ ಹೆಚ್ಚಳಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.

ಪ್ರತಿ ವರ್ಷ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಶೇ.10ರಷ್ಟು ಶುಲ್ಕವನ್ನು ಮೂರು ವರ್ಷಗಳಿಗೊಮ್ಮೆ  ಹೆಚ್ಚಿಸಲಾಗುತ್ತಿದೆ. ಆದರೆ, ವೈದ್ಯಕೀಯ ಮತ್ತು ಇಂಜನಿಯರಿಂಗ್ ಪದವಿಯಲ್ಲಿ ಏಕಾಏಕಿ ಶುಲ್ಕ ದುಪ್ಪಟ್ಟುಗೊಳಿಸಲು ಬೇಡಿಕೆ ಬಂದಿರುವುದನ್ನು ಒಪ್ಪಲು ಸಾಧ್ಯವಿಲ್ಲ.  ತುಕತೆಯ ಮೂಲಕ ವಿಷಯವನ್ನು ಇತ್ಯರ್ಥಗೊಳಿಸಲಾಗುತ್ತದೆ ಎಂದು ಹೇಳಿದರು. ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳ ಸೀಟು ಹಂಚಿಕೆಯನ್ನು ಈ ವರ್ಷ ಮಾತುಕತೆಗಳ ಮೂಲಕ ಇತ್ಯರ್ಥಗೊಳಿಸಲಾಗುವುದು. ಶೇ.60:40 ಪ್ರಮಾಣದಲ್ಲಿ ಸೀಟು ಹಂಚಿಕೆಗೆ ಮತ್ತೊಮ್ಮೆ ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ 6 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಪ್ರಗತಿಯಲ್ಲಿದೆ. ಮೂರು ಕಾಲೇಜುಗಳಿಗೆ ಅಖಿಲ ಭಾರತ ವೈದ್ಯಕೀಯ ಶಿಕ್ಷಣ ಪರಿಷತ್ ಭೇಟಿ ನೀಡಿ ತಾತ್ವಿಕ ಒಪ್ಪಿಗೆ ನೀಡಿದೆ. ಇನ್ನು ಮೂರು ಸ್ಥಳಗಳಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ದೊರೆಯಬೇಕಾಗಿದೆ ಎಂದು ಹೇಳಿದರು.

2006ರ ಉನ್ನತ ಶಿಕ್ಷಣ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಕಾಯ್ದೆಯನ್ನು ಏಕಾಏಕಿ ಜಾರಿಗೆ ತರುವುದಿಲ್ಲ. ತಿದ್ದುಪಡಿ ವಿಷಯವಾಗಿ ಈಗಾಗಲೇ ಹಲವು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ. ಸರ್ವಸಮತ ಅಭಿಪ್ರಾಯವನ್ನು ಕ್ರೋಢಿಕರಿಸಿ ಮುಂದಿನ ದಿನಗಳಲ್ಲಿ ಕಾಯ್ದೆ ಮಂಡಿಸಿ ಚರ್ಚೆಗೆ ಅವಕಾಶ ನೀಡಲಾಗುವುದು. ಅನಂತರ ಜಾರಿಗೊಳಿಸಲಾಗುವುದು ಎಂದು ಹೇಳಿದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುತ್ತಿದೆ. ಅದೇ ರೀತಿ ಮೆಡಿಕಲ್ ಕಾಲೇಜುಗಳಿರುವ  ಎಲ್ಲಾ ಸ್ಥಳಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
– ಈ ಸಂಜೆ

Write A Comment