ಕರ್ನಾಟಕ

ಪ್ರತಿಭಾವಂತ 65 ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Pinterest LinkedIn Tumblr

pushpashamanur_college

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ 65 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತ ಶಿಕ್ಷಣ ನೀಡಲಾಗುವುದು ಎಂದು ಶ್ರೀಮತಿ ಪುಷ್ಪಾ ಶಾಮನೂರು ಮಹಾಲಿಂಗಪ್ಪ ರೆಸಿಡೆನ್ಷಿಯಲ್ ಸ್ಕೂಲ್ ಮತ್ತು ಪಿ.ಯು ಸೈನ್ಸ್ ಕಾಲೇಜಿನ ಅಧ್ಯಕ್ಷರಾದ ಲಿಂಗರಾಜು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ 2 ವರ್ಷ ಉಚಿತ ವಸತಿ ಮತ್ತು ಶಿಕ್ಷಣ ನೀಡಲಾಗುವುದು. ಅಲ್ಲದೇ ಅವರಿಗೆ ಐಐಟಿ/ಎಐಪಿಎಂಟಿ ತರಬೇತಿ ಕೂಡ ನೀಡಲಾಗುವುದು ಎಂದು ಹೇಳಿದ್ದಾರೆ.

ಪಿಯು ಕಾಲೇಜಿಗೆ ಸೇರುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಏರ್ಪಡಿಸಿದ್ದು, 0 ಮತ್ತು 10ನೇ ತರಗತಿಯಲ್ಲಿದ್ದ ಗಣಿತಿ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳಿರುತ್ತವೆ. ಲಿಖಿತ ಪರೀಕ್ಷೆಯಲ್ಲಿ ಮೊದಲನೇ ಭಾಗ ಅಬ್ಜೆಕ್ಟೀವ್ ಮತ್ತು ಎರಡನೇ ಭಾಗ ವಿವರಣಾತ್ಮಕ ಪರೀಕ್ಷೆಯಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮತ್ತು ಹಾಸ್ಟೆಲ್ ಶುಲ್ಕ ಪೂರ್ತಿ ಉಚಿತವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ, ಈ ಶಿಕ್ಷಣ ಮಂಡಳಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ರು.3 ಕೋಟಿ ವಿದ್ಯಾರ್ಥಿ ವೇತನವನ್ನು ಘೋಷಿಸಿದೆ. ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ರಾಜ್ಯ ಅಥಾ ರಾಷ್ಟ್ರ ಮಟ್ಟದಲ್ಲಿ 1 ರಿಂದ 300 ರ್ಯಾಂಕ್ ಗಳಿಸಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಪ್ರತಿ ವಿದ್ಯಾರ್ಥಿಯು ರು.2.50 ಲಕ್ಷದಿಂದ ರು. 50 ಸಾವಿರಗಳ ರಿಯಾಯಿತಿ ಪಡೆಯಬಹುದಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ:

ಶ್ರೀಮತಿ ಪುಷ್ಪ ಶಾಮನೂರು ಮಹಾಲಿಂಗಪ್ಪ ವಸತಿ ಶಾಲೆ

ಪಿ.ಯು ವಿಜ್ಞಾನ ಕಾಲೇಜು, ದಾವಣಗೆರೆ.

ದೂರವಾಣಿ ಸಂಖ್ಯೆ: 08192-264696, 9886187258, 8970063300

Write A Comment